ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್
Listen to the problems of the public in the district and solve them: Deputy Commissioner Dr. Vijaya
ಹಾವೇರಿ ಜುಲೈ 08: ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಸೂಚಿಸಿದರು.
ಸೋಮವಾರ ನಗರದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರು ಸಮಸ್ಯೆಗಳನ್ನು ಹೇಳಿಕೊಂಡು ಬಂದಾಗ ಅವರ ಸಮಸ್ಯೆವನ್ನು ಆಲಿಸಿ ಪರಿಹರಿಸಿ, ಜನರು ಸರ್ಕಾರದ ಯೋಜನೆಗಳ ಕುರಿತು ಗೊಂದಲಕ್ಕೆ ಒಳಗಾದಲ್ಲಿ ಅದನ್ನು ಬಗೆಹರಿಸಿ ಆ ಯೋಜನೆಯ ಉಪಯುಕ್ತತೆಯನ್ನು ಅವರಿಗೆ ತಲುಪುವಂತೆ ಮಾಡಿ ಎಂದರು. ಜಿಲ್ಲೆಯಲ್ಲಿ ಬಗರ್‌ಹುಕುಂ ಅರ್ಜಿಗಳು ವಿಲೇ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು, ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಕಂದಾಯ ಗ್ರಾಮ, ಪಾವತಿ ಆಂದೋಲನ, ಭೂ ಸುರಕ್ಷೆ ಮೊದಲಾದವುಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿದರು. ಜಿಲ್ಲೆಯ ಸಾರ್ವಜನಿಕರು ಒಂದೇ ವಿಷಯವಾಗಿ ಪದೆ ಪದೆ ಕಚೇರಿಗೆ ಅಲೆಯುಂತಾಗಬಾರದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಮುಂದಿನ ಸಭೆಯಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ಸೂಚನೆ ನೀಡಿ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ತಹಸೀಲ್ದಾರ್ ಶರಣಮ್ಮ ಕೆ, ಗ್ರೇಡ್ 2 ತಹಸೀಲ್ದಾರ್ ಅಮೃತಗೌಡ ಪಾಟೀಲ್, ಗ್ರಾಮಾಡಳಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 