ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ: ಡಾ. ಕೆ.ಜಿ. ಕುಲಕರ್ಣಿ
Listening to music brings peace of mind: Dr. K.G. Kulkarni
ಕೊಪ್ಪಳ 29: ಸಂಗೀತ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಹಾಗೂ ಉಲ್ಲಾಸ ಉಂಟಾಗುತ್ತದೆ. ಸಂಗೀತಕ್ಕೆ ಅಪಾರವಾದ ಶಕ್ತಿ ಇದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸಂಗೀತದ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯ ವೈದ್ಯರಾದ ಡಾ. ಕೆ.ಜಿ. ಕುಲಕರ್ಣಿ ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಶುಕ್ರವಾರ ಸಂಜೆ ಸಾಂಸ್ಕೃತಿಕ ಕ್ರೀಡಾ ಹಾಗೂ ತರಬೇತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಗೀತ್ ಮತ್ತು ಗಜಲ್ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಗೀತ ಪ್ರಿಯರಿಗೆ ಸುಮಧುರ ಗಾಯನ ಅಪಾರ ಸಂತೋಷ ನೀಡುತ್ತದೆ. ಆಸಕ್ತಿಯಿಂದ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದಲ್ಲದೆ, ಆರೋಗ್ಯವೂ ಸ್ಥಿರವಾಗಿರುತ್ತದೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ್ ಮಾತನಾಡಿ, ಗಜಲ್ ಮೂಲತಃ ಅರಬಿ ಮತ್ತು ಉರ್ದು ಭಾಷೆಗಳಿಂದ ಆರಂಭವಾಗಿದ್ದು, ಇಂದು ಕನ್ನಡದಲ್ಲಿಯೂ ಜನಪ್ರಿಯವಾಗಿದೆ. ಸೌಮ್ಯ ಸ್ವಭಾವ ಹಾಗೂ ಭಾವನಾತ್ಮಕ ಮನಸ್ಸಿನವರಿಗೆ ಗಜಲ್ ಹೆಚ್ಚು ಇಷ್ಟವಾಗುತ್ತದೆ ಎಂದರು.
ಶ್ರೀ ಅನ್ನಪೂರ್ಣೇಶ್ವರಿ ಆಸ್ಪತ್ರೆಯ ವೈದ್ಯೆ ಡಾ. ಕಸ್ತೂರಿ ಕರಮುಡಿ ಮಾತನಾಡಿ, ಸಂಗೀತ ಆಲಿಸುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿಯೊಬ್ಬರೂ ಸಂಗೀತ ಆಲಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮೀನಾಕ್ಷಿ ಬಣ್ಣದ ಭಾವಿ ಮಾತನಾಡಿ, ಸಂಗೀತಕ್ಕೆ ಯಾವುದೇ ಭಾಷೆಯ ಗಡಿ ಇಲ್ಲ. ಎಲ್ಲ ಭಾಷೆಗಳಲ್ಲೂ ಸಂಗೀತವಿದ್ದು, ಅದನ್ನು ಆಲಿಸುವುದರಿಂದ ಮನಸ್ಸಿಗೆ ಉಲ್ಲಾಸ ಹಾಗೂ ನೆಮ್ಮದಿ ದೊರೆಯುತ್ತದೆ ಎಂದರು.
ಕಾರ್ಯಕ್ರಮದಲ್ಲಿ ರಾಯಚೂರಿನ ಹಿರಿಯ ಉರ್ದು ಸಾಹಿತಿ ಹಾಗೂ ಕವಿ ಡಾ. ಇಫ್ತೇಕಾರ್ ಶಕೀಲ್, ಸಂಸ್ಥೆಯ ಮಹಮ್ಮದ್ ಏಜಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಾಹಿತಿ ಹಾಗೂ ವಾಗ್ಮಿ ಎಂ. ಬದಿಯುದ್ದೀನ್ ಅಹಮದ್ ನವೀದ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.
ನಂತರ ರಾಯಚೂರಿನ ಗಜಲ್ ಗಾಯಕ ಅಖಿಲ್ ಯಾರ್ ಅವರು ಸುಮಧುರ ಗೀತ್, ಗಜಲ್ ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಗಾಯಕರಿಗೆ ಖಾಜಾ ಪಾಷಾ, ರಾಘವೇಂದ್ರ ಆಶಾಪುರ ಹಾಗೂ ವೆಂಕಟೇಶ್ ಸಾಥ್ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 