ಸರ್ಕಾರದ ಯೋಜನೆಗಳ ಪಡೆದು ಸ್ವಾವಲಂಬಿ ಜೀವನ ನಡೆಸಿ: ರಾಜು ಕಾಗೆ
Live a self-reliant life by availing government schemes: Raju Kage
ಕಾಗವಾಡ 26: ರಾಜ್ಯ ಸರ್ಕಾರ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಸಾಗಿಸುವುದಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡು, ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಅವರು, ಶುಕ್ರವಾರ ದಿ. 25 ರಂದು ತಾಲೂಕಿನ ಉಗಾರ ಖುರ್ದ ಪುರಸಭೆಯ ಆವರಣದಲ್ಲಿ ಸನ್ 2024-25 ರ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಂತ-4ರ ಅಡಿಯಲ್ಲಿ 70 ಲಕ್ಷ ವೆಚ್ಚದ 988 ಹೊಲಿಗೆ ಯಂತ್ರಗಳನ್ನು ಫಲಾನುಭವಿ ಮಹಿಳೆಯರಿಗೆ ವಿತರಣೆ ಮಾಡಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಪ್ರತಿಯೊಂದು ಪಟ್ಟಣಗಳಲ್ಲಿ ಶುದ್ದ ಕುಡಿಯುವ ನೀರು, ಒಳ್ಳೆಯ ರಸ್ತೆ, ಚರಂಡಿ, ವಿದ್ಯುತ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳು, ನಿರುದ್ಯೋಗ ಯುವಕರಿಗೆ ಹಾಗೂ ಮಹಿಳೆಯರಿಗಾಗಿ ಹಲಾವರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಪಾತಿಮಾ ನದಾಫ, ಉಪಾಧ್ಯಕ್ಷ ಸತೀಶ ಜಗತಾಪ, ಮುಖ್ಯಾಧಿಕಾರಿ ಮಹಾಂತೇಶ ಕೌಲಾಪೂರ ಸೇರಿದಂತೆ ಪಟ್ಟಣದ ಮುಖಂಡರು, ಪುರಸಭೆಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 