ದೇಶದ ಸತ್ಪ್ರಜೆಗಳಾಗಿ ಬಾಳಿರಿ: ಶ್ರೀ ಪಿ ಗಾದೆಪ್ಪ
Live as good citizens of the country: Shri P. Gadeppa
ಲೋಕದರ್ಶನ ವರದಿ
ಬಳ್ಳಾರಿ 15: ವಿದ್ಯಾರ್ಥಿ ಜೀವನ ಬಂಗಾರದ ದಿನಗಳ ಜೀವನ, ನೀವು ನಿಮ್ಮ ಪದವಿ ಮುಗಿಸಿಕೊಂಡು ಇನ್ನೂ ಉನ್ನತ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗ ಪಡೆದು ನಿಮ್ಮ ತಾಯಿ ತಂದೆಗಳಿಗೆ, ವಿದ್ಯೆ ಕಲಿಸಿದ ಸಂಸ್ಥೆಗೆ ಹೆಸರು ತರುವಂತಹ ಈ ದೇಶದ ಸತ್ಪ್ರಜೆಗಳಾಗಿ ಬಾಳಿರಿ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀ ಪಿ ಗಾದೆಪ್ಪ ಅವರು ಅಭಿಪ್ರಾಯ ಪಟ್ಟರು. ಶನಿವಾರ ನಗರದ ಶ್ರೀ ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಲಾರ್ಡ್ಸ್ ವಿದ್ಯಾಸಂಸ್ಥೆಯ ಇಂಡೋ-ಅಮೆರಿಕನ್ ಪದವಿ ಕಾಲೇಜು ವಿದ್ಯಾರ್ಥಿಗಳ ಬಿಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಆರಂಭದಲ್ಲಿ ಲಾರ್ಡ್ಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪಿ ಎಚ್ ನಾಯ್ಡು ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಇಂದು ಂಋು (ಕೃತಕ ಬುದ್ಧಿಮತ್ತೆ) ಅವಶ್ಯಕತೆ ತುಂಬಾ ಇದ್ದು ಇದರ ಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಇಂದಿನ ಂಋ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಕರೆಕೊಟ್ಟು ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯ ಸುಖಮಯವಾಗಿರಲಿ ಎಂದು ಆಶಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 