ಜೀವಂತ ಮೊಸಳೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರವಾನೆ
Live crocodile captured and sent to Forest Department officials
ಮಾಂಜರಿ, 20 : ಗ್ರಾಮಸ್ಥರು ಜೀವಂತ ಮೊಸಳೆಯನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದಂತ ಘಟನೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಾಯಂಕಾಲ 7 ಗಂಟೆಗೆ ಶಹಾಪುರ ರಸ್ತೆಯಲ್ಲಿ ಸುಮಾರು 7-8 ಅಡಿಯ ಮೊಸಳೆಯೊಂದು ಉಡಾಡುತಿತ್ತು.ಭಯದ ವಾತಾವರಣ ಸೃಷ್ಠಿಸಿತ್ತು.ಇದನ್ನು ಗಮನಿಸಿದ ಗ್ರಾಮಸ್ಥರು ಹಗ್ಗ ಹಾಗೂ ಕಟ್ಟಿಗೆಯ ಸಹಾಯದಿಂದ ಮೊಸಳೆಯನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದರು.
ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ಶಹಾಪೂರ ರಸ್ತೆಯ ತಗ್ಗು ಪ್ರದೇಶಗಳಲ್ಲಿ ಬಹಳಷ್ಟು ಮೊಸಳೆಗಳು ಇವೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮುತವರ್ಜಿಸಿ ಆ ಮೊಸಳೆಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿ, ಗ್ರಾಮಸ್ಥರಲ್ಲಿನ ಭಯ ದೂರಮಾಡಬೇಕೆಂದು ಸ್ಥಳೀಯರು ಮನವಿಯನ್ನು ಮಾಡಿಕೊಂಡಿದ್ದಾರೆ.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 