ಬೆಳಗಾವಿ 30: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಸಮುದಾಯ ಬಾನುಲಿ ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಪ್ರಸಾರ ಕಾರ್ಯಕ್ರಮ ನಡೆಸಲಾಯಿತು.
ಶನಿವಾರ ದಿನಾಂಕ 30ನೇ ನವೆಂಬರ 2024 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಏಡ್ಸ್ ದಿನದ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಯಪ್ರಕಾಶ ಅಪ್ಪಾಜಿಗೋಳ ಅವರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಶ್ವ ಏಡ್ಸ್ ದಿನದ ಇತಿಹಾಸ, ಮಹತ್ವ, ಏಡ್ಸ್ ಹೇಗೆ ಹರಡುತ್ತದೆ, ಲಕ್ಷಣಗಳು, ಏಡ್ಸ್ ರೋಗಕ್ಕೆ ತುತ್ತಾದ ರೋಗಿಗಳ ಜೀವನಶೈಲಿ ಹೇಗಿರಬೇಕು ಮತ್ತು ಎಚ್‌ಐವಿ/ಏಡ್ಸ್ ಪರೀಕ್ಷೆ ಕುರಿತು ಮಾಹಿತಿ ಹಂಚಿಕೊಂಡರು ಹಾಗೂ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕರಾದ ಮನಿಷ ಪಿ. ಎಸ್. ಮತ್ತು ಅನುಪಮಾ ಕಾರ್ಯಕ್ರಮ ನಡೆಸಿಕೊಟ್ಟರು.