ವಿಶ್ವ ರೇಬಿಸ್ ದಿನ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ
Live phone-in program on World Rabies Day
ಬೆಳಗಾವಿ 27: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಜಿಲ್ಲೆ ಇವರ ಸಹಯೋಗದಲ್ಲಿ ಶನಿವಾರ 27ನೆ ಸೆಪ್ಟೆಂಬರ್ 2025 ರಂದು ವಿಶ್ವ ರೇಬೀಸ್ ದಿನದ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಡಾ. ಆನಂದ ಪಾಟೀಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ರೇಬಿಸ್ (ಹುಚ್ಚುನಾಯಿ ರೋಗ) ಕುರಿತು ಜಾಗೃತಿ ಮೂಡಿಸಿದರು.
ಹುಚುನಾಯಿ ರೋಗ ಅಥವಾ ರೇಬಿಸ್ ಪ್ರಾಣಿಜನ್ಯ ರೋಗವಾಗಿದ್ದು, ಹುಚ್ಚು ಪ್ರಾಣಿಗಳ ಕಡಿತದಿಂದ ಲಿಸ್ಸಾ ಎಂಬ ವೈರಾಣುವಿನಿಂದ ಹರಡುವ ಮಾರಣಾಂತಿಕ ರೋಗವಾಗಿದ್ದು. ಈ ರೋಗಕ್ಕೆ ಲಸಿಕೆ ಕಂಡು ಹಿಡಿದ ಫ್ರೆಂಚ್ ವಿಜ್ಞಾನಿ ಲೂಹಿಸ್ ಪ್ಯಾಶ್ಚರ್ ರವರ ಪುಣ್ಯ ತಿಥಿಯ ದಿನವನ್ನು ವಿಶ್ವದಾದ್ಯಂತ ಪ್ರತಿ ವರ್ಷ ಸೆಪ್ಟೆಂಬರ್ 28 ರಂದು ವಿಶ್ವ ರೇಬಿಸ್ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರೋಗ ಹರಡುವ ವಿದಾನ, ರೋಗದ ಲಕ್ಷಣಗಳು, ಉದ್ರೇಕಿತ ನಾಯಿಯ ಹುಚ್ಚು ಲಕ್ಷಣಗಳು, ಮೂಕ ನಾಯಿ ಹುಚ್ಚು ಲಕ್ಷಣಗಳು, ಇತರ ಜಾನುವಾರುಗಳಲ್ಲಿ ಕಂಡು ಬರುವ ರೋಗದ ಲಕ್ಷಣಗಳು, ಮನುಷ್ಯರಲ್ಲಿ ಕಂಡುಬರುವ ಲಕ್ಷಣಗಳು ಕುರಿತು ಮತ್ತು ಪ್ರಥಮ ಚಿಕಿತ್ಸೆ ಹಾಗೂ ಮುಂಜಾಗೃತ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 