ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು : ಎಮ್.ಎಲ್.ಯಡ್ರಾಂವಿ
Locals should give top priority to cleanliness: M.L.Yadravi
ಬೆಟಗೇರಿ 17: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸ್ವಚ್ಛತೆಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಕಸ ಮತ್ತು ತ್ಯಾಜ್ಯ ವಸ್ತುಗಳನ್ನು ಬೇಕಾ ಬೀಟಿಯಾಗಿ ಎಸೆಯಬಾರದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಮ್.ಎಲ್.ಯಡ್ರಾಂವಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಸೆ.17ರಂದು ನಡೆದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಬೆಟಗೇರಿ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುದಾರ ಹಾಗೂ ಸ್ಥಳೀಯರು ಹಸಿ ಮತ್ತು ಒಣ ಕಸಗಳನ್ನು ಬೇರೆ ಬೇರೆ ಮಾಡಿ ಕಸ ತುಂಬುವ ವಾಹನ ತಮ್ಮ ಬಳಿ ಬಂದಾಗ ವಾಹನದಲ್ಲಿ ಹಾಕಬೇಕು. ಸ್ಥಳೀಯರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಸ್ಥಳೀಯರು ಗ್ರಾಪಂ ಸಹಯೋಗದಲ್ಲಿ ಗ್ರಾಮದ ಸ್ವಚ್ಛತೆ ಮತ್ತು ಅಭಿವೃದ್ಧಿಗೆ ಸಹಕರಿಸಬೇಕೆಂದರು.
ಇಲ್ಲಿಯ ಗ್ರಾಪಂ ವತಿಯಿಂದ ಸ್ಥಳೀಯ ಹಲವು ಸ್ಥಳಗಳಲ್ಲಿ ಕಸ ಹಾಗೂ ತ್ಯಾಜ್ಯ ವಸ್ತುವನ್ನು ಕಸ ತುಂಬುವ ವಾಹನದಲ್ಲಿ ತುಂಬಿ ಕಸ ವಿಲೇವಾರಿ ಸ್ಥಳಕ್ಕೆ ಸಾಗಿಸಲಾಯಿತು. ಗ್ರಾಮದ ವಿವಿಧಡೆ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳೀಯರು, ಗ್ರಾಪಂ ಸಿಬ್ಬಂದಿ ಸೇರಿ ಸ್ವಚ್ಛತಾ ಪ್ರತಿಜ್ಞಾವಿಧಿ ಆಚರಿಸಿದರು.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ, ಈರಣ್ಣ ದಂಡಿನ, ನೇತ್ರಾ ಬಡಿಗೇರ, ಲಕ್ಕಮ್ಮ ಚಂದರಗಿ, ಮೇಳೆಪ್ಪ ಹರಿಜನ, ಸಾಂವಕ್ಕ ಹರಿಜನ, ಬಸವರಾಜ ದೇಯಣ್ಣವರ, ಶಿವಾನಂದ ತೋಟಗಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 