ಬೆಂಗಳೂರು, ಏ ೧೦, ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ವೈರಾಣು ಮಹಾಮಾರಿಯನ್ನು ನಿಯಂತ್ರಿಸುವ ಕ್ರಮವಾಗಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ವಿಸ್ತರಣೆ ಸಾಧ್ಯತೆಯ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಮಂಡಳಿ ಮೇ ತಿಂಗಳಿಗೆ ಮುಂದೂಡಿದೆ. ಪಿ ಯು ಸಿ ಪರೀಕ್ಷೆಯನ್ನು ಮೇ ತಿಂಗಳಿಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಿಸಿದ್ದಾರೆ.ಲಾಕ್ ಡೌನ್ ತೆರವುಗೊಳಿಸಿ, ಜನ ಜೀವನ ಸಹಜ ಸ್ಥಿತಿಗೆ ಬಂದನಂತರ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮೇ ತಿಂಗಳಲ್ಲಿ ಪ್ರಕಟಿಸಲಾಗುವುದು. ಮಕ್ಕಳು ಪರೀಕ್ಷೆಗಾಗಿ ಸಿದ್ದಗೊಳ್ಳಲು ಸಾಧ್ಯವಾಗುವಂತೆ ಒಂದು ವಾರಕ್ಕೆ ಮುನ್ನ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಎರಡೂ ಪರೀಕ್ಷೆಗಳು ಈ ತಿಂಗಳು ಹಾಗೂ ಮುಂದಿನ ತಿಂಗಳ ಮೊದಲ ವಾರದಲ್ಲಿ ನಿಗದಿಯಂತೆ ನಡೆಯಬೇಕಿತ್ತು. ಕಳೆದ ತಿಂಗಳು ಜಾರಿಗೊಳಿಸಿರುವ ಲಾಕ್ ಡೌನ್ ಜಾರಿಯಿಂದಾಗಿ ನಿಗಧಿತ ಪರೀಕ್ಷಾ ದಿನಾಂಕಗಳನ್ನು ಸರ್ಕಾರ ಎರಡನೇ ಬಾರಿ ಮುಂದೂಡಿದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಕ್ಕಳ ಭವಿಷ್ಯ ಅಧ್ಯಯನದ ಬಗ್ಗೆ ನಿರ್ಧರಿಸುತ್ತದೆ, ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಗುರಿ ಹೊಂದಿರುವ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಅತ್ಯಗತ್ಯವಾಗಿದೆ.