ನವದೆಹಲಿ, ಏಪ್ರಿಲ್ 11, ದೇಶದಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದಿನ ಕ್ರಮಗಳನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮುಖಗವಸು ಧರಿಸಿದ್ದರು.ದೇಶದಲ್ಲಿ ಕೊರೊನವೈರಸ್‍ನ ದೃಢಪಟ್ಟ ಪ್ರಕರಣಗಳ ಸಂಖ್ಯೆ 7,000 ದಾಟಿದ ನಡುವೆಯೇ ಮಹತ್ವದ ಈ ಸಭೆ ನಡೆದಿದೆ.ಮಾರಕ ವೈರಸ್‌ನಿಂದ ದೇಶಾದ್ಯಂತ ಈವರೆಗೆ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ..ಈ ಹಿಂದೆ ವಿರೋಧ ಪಕ್ಷಗಳ ಮುಖಂಡರೊಂದಿಗಿನ ಸಭೆಯಲ್ಲಿ ಪ್ರಧಾನಿ, ಸದ್ಯದ ಪರಿಸ್ಥಿತಿ ಸಾಮಾಜಿಕ ತುರ್ತು ಪರಿಸ್ಥಿತಿಗೆ ಹೋಲುವಂತಿದೆ ಎಂದು ಹೇಳಿದ್ದರು.