ಲಾಕ್ಡೌನ್ ವಿಸ್ತರಣೆ, ಎಲ್ಲರ ಚಿತ್ತ ದೆಹಲಿಯತ್ತ..!!!

ನವದೆಹಲಿ ಎ 11,ದೇಶದಲ್ಲಿ  ಜಾರಿಯಲ್ಲಿ ಇರುವ  21 ದಿನಗಳ ಲಾಕ್ಡೌನ್ ಮುಕ್ತಾಯಗೊಳ್ಳಲು ಇನ್ನು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿಯವರು ಇಂದು ಅಥವಾ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನ  ಪ್ರಕಟಿಸಲಿದ್ದು ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ.ಈ ನಡುವೆ ಇಂದು ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಲಾಕ್ಡೌನ್ ವಿಸ್ತರಣೆ ಕುರಿತಾಗಿ ವಿಡಿಯೋ ಸಂವಾದ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಸಂವಾದಲ್ಲಿ ಪ್ರಧಾನಿ ಮೋದಿಯವರಿಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಅವಧಿ  ಮುಂದುವರೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ಮೋದಿಯವರು ಇಂದು ಅಥವಾ ನಾಳೆ ಈ ಬಗ್ಗೆ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದ್ದು ಎಲ್ಲರ ಚಿತ್ತ ದೆಹಲಿಯತ್ತ ನೆಟ್ಟಿದೆ. ಮತ್ತೆ ಎಷ್ಟು ದಿನಗಳ ಕಾಲ ದೇಶವನ್ನು ಲಾಕ್ ಡೌನ್ ಅನ್ನು ಮುಂದುವರಿಸಲಿದ್ದಾರೆ ಎಂಬ ಕೂತುಹಲ ಸಹ ಹೆಚ್ಚಾಗಿದೆ.