ನವದೆಹಲಿ, ಮಾ 24, ದೇಶದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 30 ರಾಜ್ಯಗಳ 548 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಘೋಷಿಸಲಾಗಿದೆ. ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕರ್ನಾಟಕ, ಪಂಜಾಬ್, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ಕೇರಳ, ಹರಿಯಾಣ, ಬಿಹಾರ್, ಉತ್ತರಾಖಂಡ, ಗುಜರಾತ್, ಅಸ್ಸಾಂ, ತ್ರಿಪುರ, ಗೋವಾ ನಾಗಲ್ಯಾಂಡ್, ಮಣಿಪುರ, ಜಾರ್ಖಂಡ್, ಅರುಣಾಚಲ ಪ್ರದೇಶ, ಮೇಘಾಲಯ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಚಂಡೀಗರ್, ಲಡಾಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.ಇದುವರೆಗೆ ಕಿಲ್ಲರ್ ಕೊರೊನಾಗೆ 9 ಮಂದಿ ಬಲಿಯಾಗಿದ್ದಾರೆ, ಸುಮಾರು 471 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.ಹೀಗಾಗಿ ಕೆಲವು ಮುನ್ನೆಚ್ಚರಿಕಾ ಕ್ರಮವಾಗಿ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು 548 ಜಿಲ್ಲೆಗಳು ಸಂಪೂರ್ಣ ಲಾಕ್ ಡೌನ್ ಆಗಿವೆ.