ಕಲಬುರಗಿ, ಏ.10,ಕಲಬುರಗಿಯ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿ ಇಂದಿಗೆ ಒಂದು ತಿಂಗಳು ಗತಿಸಿದ್ದು, ರಾಜ್ಯದಲ್ಲೇ ಇದೇ ಮೊದಲ ಬಲಿಯಾಗಿತ್ತುಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಎರಡು ಬಲಿ ಪಡೆದಿದ್ದು, 9 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.ಈ ಹಿನ್ನೆಲೆಯಲ್ಲಿ ನಗರದಾದ್ಯಂತ ದಿನದಿಂದ ದಿನಕ್ಕೆ ಕಟ್ಟು ನಿಟ್ಟಿನ ಕ್ರಮವನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.ಗುರುವಾರ ಕಲಬುರಗಿ ನಗರದಲ್ಲಿ ಅನಗತ್ಯವಾಗಿ ಓಡಾಡುವರನ್ನು ಹಿಡಿದು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.ಲಾಕ್ ಡೌನ್ ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ ನಗರದ ರೋಜಾ ಮತ್ತು ಚೌಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಂದೇ ದಿನ 17 ಜನರಿಗೆ ಜೈಲಿಗೆ ಹಾಕಿದ್ದಾರೆ.ಲಾಕ್ ಡೌನ್ ನಿಯಮ ಉಲ್ಲಂಘಿಸಿ ಚಹಾ ಮಾರಾಟ ಮಾಡುವುದು, ಅನಗತ್ಯವಾಗಿ ತಿರುಗಾಡುತ್ತಿದ್ದ 17 ಜನರನ್ನು ಬಂಧಿಸಿ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.ಅಲ್ಲದೇ, ಅನಗತ್ಯವಾಗಿ ಅಡ್ಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.