ಕಲಬುರಗಿ,
ಏ.19,ಲಾಕ್ ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ
ಠಾಣೆಯಲ್ಲಿ 38 ಪ್ರಕರಣಗಳು ದಾಖಲಾಗಿವೆ ಎಂದು ನಗರ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ತಿಳಿಸಿದ್ದಾರೆ.ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಯಾಗಿದ್ದು, ನಿಯಮ
ಉಲ್ಲಂಘಿಸಿದ ಜಿಲ್ಲೆಯ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಶಹಾಬಾದ್, ಸೇಡಂ
ಮತ್ತು ಚಿಂಚೋಳಿ ತಾಲೂಕಿನ ವಿವಿಧ ಠಾಣೆಗಳಲ್ಲಿ 38 ಪ್ರಕರಣ ದಾಖಲಾಗಿದ್ದು, 75 ಜನರನ್ನು
ಬಂಧಿಸಲಾಗಿದೆ ಎಂದರು.ಅಲ್ಲದೇ, 61ಜನರ ವಿರುದ್ಧ ರೌಡಿ ಶೀಟರ್ ತೆರೆಯಲಾಗಿದೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸುಖಾಸುಮ್ಮನೇ ರಸ್ತೆ ಮೇಲೆ ಸಂಚರಿಸುತ್ತಿದ್ದ ಸುಮಾರು
700ಕ್ಕಿಂತ ಅಧಿಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.