ಲೋಕ ಅದಾಲತ್ ತ್ವರಿತ ಮತ್ತು ಸೌಹಾರ್ದಯುತ ನ್ಯಾಯ ಒದಗಿಸುವ ಅತ್ಯುತ್ತಮ ವೇದಿಕೆ: ನ್ಯಾಯಾಧೀಶೆ
Lok Adalat is an excellent platform for providing speedy and amicable justice: Judge
ಬ್ಯಾಡಗಿ 13: ಲೋಕ ಅದಾಲತ್ ಸಾರ್ವಜನಿಕರಿಗೆ ಶೀಘ್ರ, ಸುಲಭ ಹಾಗೂ ಸೌಹಾರ್ದಯುತ ನ್ಯಾಯ ಒದಗಿಸುವ ಅತ್ಯುತ್ತಮ ಪರ್ಯಾಯ ವೇದಿಕೆಯಾಗಿದೆ ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ರಾಜೇಶ್ವರಿ ಜೆ. ಪುರಾಣಿಕ್ ಹೇಳಿದರು. ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾನ್ಯ ನ್ಯಾಯಾಲಯಗಳಲ್ಲಿ ವರ್ಷಗಳ ಕಾಲ ಬಾಕಿ ಉಳಿಯುವ ಪ್ರಕರಣಗಳಿಗೆ ಲೋಕ ಅದಾಲತ್ನಲ್ಲಿ ಉಭಯ ಪಕ್ಷಗಳ ಪರಸ್ಪರ ಒಪ್ಪಂದದ ಮೂಲಕ ಒಂದೇ ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ರಾಜಿಯಾಗಬಹುದಾದ ಕ್ರಿಮಿನಲ್, ಸಿವಿಲ್, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ ಪರಿಹಾರ, ಕುಟುಂಬ ಕಲಹ ಹಾಗೂ ಭೂಸ್ವಾಧೀನ ಸೇರಿದಂತೆ ವಿವಿಧ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಬಹುದಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 9,288 ಪ್ರಕರಣಗಳು ಇತ್ಯರ್ಥಗೊಂಡಿದ್ದು, ?4,14,11,583 ಮೊತ್ತದ ರಾಜಿ ಹಾಗೂ ಪರಿಹಾರ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ಟಿ. ನಾಯಕ, ಲೋಕ ಅದಾಲತ್ನಲ್ಲಿ ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ. ಈಗಾಗಲೇ ಪಾವತಿಸಿರುವ ನ್ಯಾಯಾಲಯ ಶುಲ್ಕವನ್ನು ಪ್ರಕರಣ ರಾಜಿಯಾದ ನಂತರ ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಲೋಕ ಅದಾಲತ್ನ ತೀಪು ಸಿವಿಲ್ ನ್ಯಾಯಾಲಯದ ಆದೇಶಕ್ಕೆ ಸಮಾನವಾಗಿದ್ದು, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೀಗಾಗಿ ಪ್ರಕರಣಕ್ಕೆ ಶಾಶ್ವತ ಪರಿಹಾರ ದೊರೆಯುತ್ತದೆ. ಇಲ್ಲಿ ಯಾರಿಗೂ ಸೋಲು-ಗೆಲುವು ಇರುವುದಿಲ್ಲ; ಉಭಯ ಪಕ್ಷಗಳಿಗೂ ನ್ಯಾಯ ದೊರೆಯುವುದರಿಂದ ಕುಟುಂಬ ಹಾಗೂ ಸಮಾಜದಲ್ಲಿ ಸೌಹಾರ್ದತೆ ಉಳಿಯುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಬಿ.ಎಸ್. ಚೂರಿ, ನ್ಯಾಯವಾದಿ ಶಂಕರ ಬಾಕಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 