ಲೋಕ್ ಅದಾಲತ್ ಮಧ್ಯಸ್ಥಿಕೆ: ರಾಜಿ ಸಂಧಾನದ ಮೂಲಕ ಕಡಿಮೆ ಅವಧಿಯಲ್ಲಿ ಪರಿಹಾರ: ನ್ಯಾ. ದರಗದ
Lok Adalat mediation: Solution in short time through conciliation: Justice Dargada
ಕೊಪ್ಪಳ 23: ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶಎಸ್. ದರಗದ ಹೇಳಿದರು.
ಅವರು ಬುಧವಾರ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಕಛೇರಿ ಸಭಾಂಗಣದಲ್ಲಿರಾಷ್ಟೀಯ ಲೋಕ್‌ಅದಾಲತ್, ಮಧ್ಯಸ್ಥಿಕೆಯ ವಿಶೇಷ ಆಂದೋಲನ ಹಾಗೂ ಖಾಯಂಜನತಾ ನ್ಯಾಯಾಲಯಕುರಿತು ಮಾಹಿತಿ ನೀಡಲುಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಮಧ್ಯಸ್ಥಿಕೆಯು ರಾಜಿ ಸಂಧಾನದ ಮೂಲಕ ಕಡಿಮೆಅವಧಿಯಲ್ಲಿ ಶೀಘ್ರ ಪರಿಹಾರ ಕಂಡುಕೊಳ್ಳಬಹುದಾಗಿದೆ.ಇದರಿಂದಉಭಯ ಪಕ್ಷಗಾರರು ಸಮಯದಜೊತೆಗೆ ಹಣದ ಉಳಿತಾಯವನ್ನು ಮಾಡಬಹುದಾಗಿದೆ.ರಾಷ್ಟ್ರವ್ಯಾಪಿ ಮಧ್ಯಸ್ಥಿಕೆಯ ಕುರಿತು 90 ದಿನಗಳ ಕಾಲ ವಿಶೇಷ ಅಂದೋಲನದ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸರ್ವೋಚ್ಛ ನ್ಯಾಯಾಲಯವು ಈ ವಿಶೇಷ ವ್ಯವಸ್ಥೆಯನ್ನು ಮಾಡಿದೆ.ಈ ಪ್ರಕ್ರಿಯೆಯ ಮೂಲಕ ಉಭಯ ಪಕ್ಷಗಾರರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ತಟಸ್ಥ ಹೊಂದಿದ ಮಧ್ಯಸ್ಥಿಕೆಗಾರರು ಮಧ್ಯಸ್ಥಿಕೆ ಮಾಡುವ ಮೂಲಕ ವಿವಾದವನ್ನು ಸೃಜನಾತ್ಮಕವಾಗಿಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ.ಮಧ್ಯಸ್ಥಿಕೆಯು ಸ್ವಪ್ರೇರಿತವಾದುದಲ್ಲದೇಗೌಪ್ಯವಾಗಿಯೂಇರುತ್ತದೆ ಮತ್ತುಇದು ಪಾರದರ್ಶಕತೆಯಿಂದಕೂಡಿರುತ್ತದೆ.
ಮಧ್ಯಸ್ಥಿಕೆಯಲ್ಲಿ ಕಡಿಮೆ ಕಾಲ ಮಿತಿಯಲ್ಲಿ ಆಪ್ತ ಸಮಾಲೋಚನೆ ಮೂಲಕ ಮಧ್ಯಸ್ಥಿಕೆ ನಡೆಯುವುದರಿಂದಅರ್ಥಪೂರ್ಣಚರ್ಚೆ ನಡೆದು ಪ್ರಕರಣವು ವ್ಯಾಜ್ಯ ಮುಕ್ತವಾಗಿ ಬಗೆಹರಿಯಲು ಸಹಾಯಕವಾಗುತ್ತದೆ ಎಂದರು.ಮಧ್ಯಸ್ಥಿಕೆಯಲ್ಲಿ ಕೌಟುಂಬಿಕ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ವಿಚ್ಛೇದನ ಪ್ರಕರಣಗಳು, ಚೆಕ್ ಬೌನ್ಸ ಪ್ರಕರಣಗಳು ಬಗೆಹರಿಸಬಹುದಾಗಿದೆ.90 ದಿನಗಳ ವಿಶೇಷ ಮಧ್ಯಸ್ಥಿಕೆಯು ಪ್ರತಿ ದಿನವು ನಡೆಯಲಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆಯನ್ನುಕಡಿಮೆ ಮಾಡುವಉದ್ದೇಶ ಹೊಂದಿದೆ.ಇದರಿಂದ ವಕೀಲರುತಮ್ಮಕಕ್ಷಿಗಾರರ ಮನವೊಲಿಸುವ ಮೂಲಕ ಮಧ್ಯಸ್ಥಿಕೆಯ ವಿಶೇಷ ಆಂದೋಲನವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆಎಂದು ಹೇಳಿದರು.
*ಖಾಯಂಜನತಾ ನ್ಯಾಯಾಲಯ:* ಸಾರ್ವಜನಿಕಉಪಯುಕ್ತ ಸೇವೆ ಗಳಿಗೆ ಸಂಬಂಧಿಸಿದಂತೆ ಉದ್ಭವಿಸುವ ವಿವಾದಗಳ ಅತಿ ಶೀಘ್ರ ಹಾಗೂ ಖರ್ಚಿಲ್ಲದತೀರ್ಮಾನಕ್ಕಾಗಿಖಾಯಂಜನತಾ ನ್ಯಾಯಾಲಯಗಳು ವರವೆಂದೇ ಹೇಳಬಹುದು. 1987ರ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯನ್ನು 2002ರಲ್ಲಿ ಕೇಂದ್ರ ಸರ್ಕಾರವು ತಿದ್ದುಪಡಿ ಮಾಡಿ, ವಿ.ಐ.ಎ ಅಧ್ಯಾಯವನ್ನು ಹೊಸದಾಗಿ ಸೇರಸುವುದರ ಮೂಲಕ ಖಾಯಂಜನತಾ ನ್ಯಾಯಾಲಯಗಳನ್ನು ಅಸ್ಥಿತ್ವಕ್ಕೆ ತಂದಿದೆ.ಸಾರ್ವಜನಿಕರು ಹಾಗೂ ಸಾರ್ವಜನಿಕ ಉಪಯುಕ್ತತಾ ಸೇವೆಯ ಸಂಸ್ಥೆಗಳು ಇದರ ಸದುಪಯೋಗ ಪಡೆಯಬಹುದಾಗಿದೆ.ವಕೀಲರು ಸಹ ಈ ಖಾಯಂಜನತಾ ನ್ಯಾಯಾಲಯದ ವೇದಿಕೆಯನ್ನು ಉಪಯೋಗಿಸಿಕೊಂಡು ತಮ್ಮಕಕ್ಷಿಗಾರರಿಗೆಖರ್ಚಿಲ್ಲದೆ ಶೀಘ್ರವಾಗಿ ಪರಿಹಾರವನ್ನುಕೊಡಿಸಬಹುದಾಗಿದೆಎಂದರು.
ಈ ಹಿಂದೆ ನಡೆದ ರಾಷ್ಟ್ರೀಯ ಲೋಕ್‌ಅದಾಲತ್ನಲ್ಲಿ ಅತೀ ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.ಜಿಲ್ಲೆಯ ವಕೀಲರು, ನ್ಯಾಯಾಧೀಶರು, ಮಧ್ಯಸ್ಥಗಾರರಿಗೆರಾಜಿಸಂಧಾನಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಕ್ಕೆ ಮತ್ತು ಈ ಕುರಿತು ಹೆಚ್ಚಿನ ಪ್ರಚಾರ ನೀಡಿದ ಮಾಧ್ಯಮವರಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತೇನೆಎಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಸಹಾಯಕ ನಿರ್ದೇಶಕರಾದಡಾ. ಸುರೇಶ ಜಿ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಇತರೆಅಧಿಕಾರಿ, ಸಿಬ್ಬಂದಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 