ಲೋಕಾಯುಕ್ತ ದಾಳಿ: ಎಇಇ ಅಜಯ್ ಸಿಂಗ್ ನಿವಾಸದಲ್ಲಿ ಕೆಜಿಗಟ್ಟಲೆ ಚಿನ್ನ, ಕೋಟಿ ಕೋಟಿ ಹಣ ಪತ್ತೆ
Lokayukta raid: Kgs of gold, crores of rupees found in AEE Ajay Singh's residence
ಬೆಳಗಾವಿ 07: ಭ್ರಷ್ಟಾಚಾರ ಆರೋಪದಡಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಚಿನ್ನ, ಕೋಟಿಗಟ್ಟಲೆ ಹಣ ಪತ್ತೆ ಮಾಡಿದ್ದಾರೆ.
ನಗರದ ಆಂಜನೇಯ ನಗರದಲ್ಲಿರುವ ನಿವಾಸ, ಅಥಣಿ ಹಾಗೂ ಹುಕ್ಕೇರಿ ಪಟ್ಟಣಗಳಲ್ಲಿನ ಆಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಒಂದು ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದ್ದು, ಬ್ಯಾಂಕ್ ಖಾತೆಗಳಲ್ಲಿ ಸುಮಾರು 2 ಕೋಟಿ ಠೇವಣಿ ಇರುವುದೂ ಪರೀಶೀಲನೆ ವೇಳೆ ಬೆಳಕಿಗೆ ಬಂದಿದೆ.
ಬೆಳಗಾವಿ ನಗರದಲ್ಲೇ ಅಕ್ಕಪಕ್ಕದಲ್ಲಿರುವ ಮೂರು ಮನೆಗಳನ್ನು ಹೊಂದಿರುವುದು ಅಧಿಕಾರಿಯ ಆಸ್ತಿ ಪ್ರಮಾಣದ ಬಗ್ಗೆ ಅನುಮಾನ ಹುಟ್ಟಿಸಿದೆ. ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಡಿವೈಎಸ್ಪಿ ಬಿಎಸ್ ಪಾಟೀಲ್ ಹಾಗೂ ಭರತ್ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ದಾಖಲೆಗಳ ಪರೀಶೀಲನೆ ನಡೆಯುತ್ತಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 