ಉತ್ತರ ಕನ್ನಡದ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತರ ಭೇಟಿ : ದಾಖಲೆ ಪರೀಶೀಲನೆ
Lokayukta visits Sub-Registrar offices in Uttara Kannada: Document review
ಕಾರವಾರ 05: ಸಾಮಾಜಿಕ ಜಾಲತಾಣದಲ್ಲಿ ರಾಮಸೇನೆ ದಾಳಿಯಿಂದ ವಿವಾದದಲ್ಲಿ ಸಿಲುಕಿದ ಯೂಟ್ಯೂಬರ್ ಖಾಜಾ ಬಂದೇ ನವಾಜ್ (ಮುಕಳೆಪ್ಪ) ಅವರ ವಿವಾಹ ನೋಂದಣಿ ಪ್ರಕರಣ ಇದೀಗ ಎಲ್ಲಾ ವಿವಾಹ ನೊಂದಣಿ ದಾಖಲೆ ಗಳನ್ನು ಪರೀಶೀಲಿಸುವಂತೆ ಮಾಡಿದೆ.
ಖಾಜಾ ಬಂದೇ ನವಾಜ್ ನಿಗದಿತ ವಾಸಸ್ಥಾನದ ದಿನಾಂಕ ದಾಖಲೆ ನೀಡಿದೇ ಪ್ರೇಮ ವಿವಾಹ ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾರವಾರ ಲೋಕಾಯುಕ್ತ ಅಧಿಕಾರಿಗಳು ಕಾರವಾರ ಸೇರಿದಂತೆ ಮುಂಡಗೋಡ , ಹಳಿಯಾಳ, ಅಂಕೋಲಾ, ಕುಮಟಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ವಿವಾಹ ನೊಂದಣಿ ದಾಖಲೆಗಳ ಪರೀಶೀಲನೆಯನ್ನು ಬುಧುವಾರ ಕೈಗೊಂಡಿದ್ದಾರೆ.ಶ್ರೀರಾಮ ಸೇನೆ ಹಾಗೂ ಗಾಯತ್ರಿ ತಾಯಿ ಶಿವಕ್ಕ ಅವರು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಕಾರವಾರದ ಲೋಕಾಯುಕ್ತ ಡಿವೈಎಸ್ಪಿ ಧನ್ಯ ನಾಯ್ಕ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ವಿವಾಹ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ವಿವಾಹ ನೊಂದಣಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕಲಿ ದಾಖಲೆಗಳ ಬಳಕೆಯ ಬಗ್ಗೆ ಪರೀಶೀಲನೆ ಸಹ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ದೂರು ಪ್ರಕಾರ, ಮುಂಡಗೋಡು ಕಚೇರಿಯಲ್ಲಿ ನಿಯಮ ಉಲ್ಲಂಘಿಸಿ ಮತ್ತು ನಕಲಿ ದಾಖಲೆ ಆಧಾರದ ಮೇಲೆ ವಿವಾಹ ನೋಂದಣಿ ಮಾಡಲಾಗಿತ್ತು.
ಇದೇ ಹಿನ್ನೆಲೆಯಲ್ಲಿ ಕಾರವಾರ, ಕುಮಟಾ, ಶಿರಸಿ, ಸಿದ್ದಾಪುರ, ಹಳಿಯಾಳ, ಜೋಯಿಡಾ ಹಾಗೂ ಯಲ್ಲಾಪುರ ಸೇರಿದಂತೆ ಜಿಲ್ಲೆಯ ಇತರ ವಿವಾಹ ನೋಂದಣಾಧಿಕಾರಿ ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ತಂಡಗಳು ದಾಖಲೆಗಳನ್ನು ಪರೀಶೀಲಿಸುತ್ತಿದ್ದು, ಅಕ್ರಮದ ಮಟ್ಟವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ. ಈ ಕ್ರಮದಿಂದ ಜಿಲ್ಲಾದ್ಯಂತ ನೋಂದಣಾಧಿಕಾರಿ ಕಚೇರಿಗಳ ಕಾರ್ಯವೈಖರಿಯ ಮೇಲೆ ಸಂಶಯ ಮೂಡಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 