ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ
Lord Buddha is the great messenger who brought the message of peace to the world
ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ
ಗದಗ 12: ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಸೋಮವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಭಗವಾನ್ ಬುದ್ಧರ ಜಯಂತಿ ಸಮಾರಂಭದಲ್ಲಿ ಭಗವಾನ್ ಬುದ್ಧರ ಮೂರ್ತಿಗೆ ಪುಷ್ಪ ಸಮರ್ಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜೀವನವು ದು:ಖಮಯವಾಗಿದೆ. ಆಸೆಯೇ ದು:ಖಕ್ಕೆ ಮೂಲ ಕಾರಣವಾಗಿದೆ. ಜೀವನದಲ್ಲಿ ದು:ಖ ನಿವಾರಣೆಗಾಗಿ ಅಷ್ಟಾಂಗ ಮಾರ್ಗಗಳನ್ನು ಭಗವಾನ್ ಬುದ್ಧರು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ. ಆಧ್ಯಾತ್ಮಿಕ ಜೀವನ ನಡೆಸಲು ಹಾಗೂ ಶಾಂತಿಯುತ ಜೀವನ ನಿರ್ವಹಣೆಗಾಗಿ ಹಿಂಸೆ ಮಾಡದಂತೆ ಭಗವಾನ್ ಬುದ್ಧರು ಉಪದೇಶಿಸಿದ್ದಾರೆ. ಭಗವಾನ್ ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯತೆಯಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.ಸರ್ಕಾರದಿಂದ ಪ್ರಥಮ ಬಾರಿಗೆ ಭಗವಾನ ಬುದ್ಧರ ಜಯಂತಿ ಆಚರಿಸುವ ಮೂಲಕ ಬುದ್ಧರ ಆಚಾರ ವಿಚಾರ ಸಂದೇಶಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಇದು ನಿತ್ಯ ನಿತಂತರ ಸಾಗಲಿದೆ ಎಂದು ಅನ್ನಪೂರ್ಣ ಎಂ ಅವರು ಹೇಳಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ವೆಂಕಟೇಶಯ್ಯ ಅವರು ವಿಶೇಷ ಉಪನ್ಯಾಸಕಾರಿ ಆಗಮಿಸಿ ಮಾತನಾಡಿ, ಭಗವಾನ್ ಬುದ್ಧರ ಜಯಂತಿಯನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹವಾಗಿದೆ. ವಿಶ್ವಕ್ಕೆ ಭಗವಾನ್ ಬುದ್ಧರು ಶಾಂತಿ ಮಂತ್ರ ಸಾರಿದ್ದಾರೆ. ಸಮಾಜದಲ್ಲಿನ ರೋಷ, ದ್ವೇಷ, ಅಸೂಯೆ ಸಮಾಜಘಾತುಕ ವಿಚಾರಗಳಿಂದ ಹೊರಬಂದು ಶಾಂತಿಯ ಬದುಕನ್ನು ನಡೆಸಬೇಕು. ಸುಳ್ಳು ಹೇಳಬಾರದು. ಕಳ್ಳತನ, ಅವಮಾನ ಮಾಡಬಾರದು. ಮತ್ತೊಬ್ಬರ ಆಸ್ತಿ ಅಪಹರಿಸುವುದು, ಮತ್ತೊಬ್ಬರ ಮನಸ್ಸಿಗೆ ನೋವು ಉಂಟುಮಾಡುವುದನ್ನು ತ್ಯಜಿಸಬೇಕಲ್ಲದೇ ಮತ್ತೇರಿಸುವ ವಸ್ತುಗಳನ್ನು ತ್ಯಜಿಸಿ ಗೌರವದಿಂದ ಮೌಲ್ಯಯುತ ಜೀವನ ಸಾಗಿಸಬೇಕೆಂದು ಭಗವಾನ್ ಬುದ್ಧರು ಸಮಾಜಕ್ಕೆ ಸಂದೇಶ ಸಾರಿದ್ದಾರೆ. ಮನುಷ್ಯನು ಸಂಸ್ಕೃತಿ ಹೀನನಾಗಬಾರದು. ಪ್ರಜ್ಞಾವಂತನಾಗಿ ಬದುಕಬೇಕು. ಸಮಾಜಕ್ಕೆ ಮಾರಕವಾಗುವಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಬಾರದು. ತಮ್ಮ ತಮ್ಮ ಜವಾಬ್ದಾರಿ ಅರಿತುಕೊಂಡು ಜೀವನ ನಿರ್ವಹಣೆ ಮಾಡಬೇಕೆಂದು ಭಗವಾನ್ ಬುದ್ಧರು ಜಗತ್ತಿಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಸಂದೇಶಗಳನ್ನು ಪ್ರತಿಯೊಬ್ಬರೂ ಅನುಸರಿಬೇಕು ಎಂದು ತಿಳಿಸಿ ಬುದ್ಧರ ಪಂಚಶೀಲ ಮಂತ್ರ ಪಠಣೆಯ ಅರ್ಥವನ್ನು ಸವಿಸ್ತಾರವಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಭಗವಾನ್ ಬುದ್ಧರ ವಂದನೆಯನ್ನು ಪಠಣ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು, ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಪಂಡಿತ ವೆಂಕಟೇಶ ಅಲ್ಕೋಡ್ ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 