ಕಲಬುರಗಿ, ಜ 30,ಬೈಕ್‌ಗೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಸಂಭವಿಸಿದೆ. ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹಾದೇವಪ್ಪಾ ಸಾಲೆಗಾಂವ್ (30) ಮೃತ ದುರ್ದೈವಿಗಳು. ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದವರು ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.