ದೇಶದ ವ್ಯಾಪಾರ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಲಾರಿ ಚಾಲಕರ ಕೊಡುಗೆ ಅಪಾರ : ರಾಹುಲ್ ಶಿಂಧೆ
Lorry drivers' contribution to the country's trade, industry and agriculture sectors is immense: Rah
ಲೋಕದರ್ಶನ ವರದಿ
ಯಮಕನಮರಡಿ 06: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಲಾರಿ ಚಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ದೇಶದ ವಿವಿಧ ಭಾಗಗಳಿಗೆ ಅಗತ್ಯವಾದ ಆಹಾರ ಪದಾರ್ಥಗಳು, ಕೈಗಾರಿಕಾ ವಸ್ತುಗಳು, ಓಷಧಿಗಳು ಮತ್ತು ಇತರೆ ಸಾಮಗ್ರಿಗಳನ್ನು ಸುರಕ್ಷಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ತಲುಪಿಸುವ ಕೆಲಸವನ್ನು ಲಾರಿ ಚಾಲಕರು ನಿರಂತರವಾಗಿ ಮಾಡುತ್ತಿದ್ದಾರೆ. ಅವರ ಪರಿಶ್ರಮದಿಂದ ದೇಶದ ವ್ಯಾಪಾರ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಗಳು ಸರಾಗವಾಗಿ ನಡೆಯುತ್ತಿವೆ ಎಂದು ಅವರು ತಿಳಿಸಿ, ಅವರ ಕಲ್ಯಾಣ ಮತ್ತು ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುವುದು ಅಗತ್ಯವೆಂದು ಜಿಲ್ಲಾ ಪಂಚಾಯತ್ ಬೆಳಗಾವಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಾಹುಲ್ ಶಿಂಧೆ, ಅಭಿಪ್ರಾಯಪಟ್ಟರು.
ಹತ್ತರಗಿ ಟೋಲ್ ಪ್ಲಾಜಾ ಸಮೀಪ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ವತಿಯಿಂದ ಲಾರಿ ಚಾಲಕರ ಅಭ್ಯುದಯಕ್ಕಾಗಿ ಆಯೋಜಿಸಿದ್ದ ಅಭಯ ಸಾರಥಿ ಯೋಜನೆಯ ಆರೋಗ್ಯ ಶಿಬಿರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಫೋರ್ಸೈಟ್ ಫೌಂಡೇಶನ್ ಹಾಗೂ ಐಐಟಿ ನವದೆಹಲಿ ಇವರ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಕೆ. ರಾಮರಾಜನ್, ಐಪಿಎಸ್ ಹಾಗೂ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶ್ರೀ ಭಾನುಪ್ರಕಾಶ್ ಅವರು ಭೇಟಿ ನೀಡಿ ಶಿಬಿರದ ಕಾರ್ಯಚಟುವಟಿಕೆಗಳನ್ನು ಪರೀಶೀಲಿಸಿದರು. ಈ ಸಂದರ್ಭದಲ್ಲಿ ಅವರು ಸಂಸ್ಥೆಯ ಸಮಾಜಮುಖಿ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಲಾರಿ ಚಾಲಕರ ಆರೋಗ್ಯ ತಪಾಸಣೆ, ಜಾಗೃತಿ ಮತ್ತು ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಂಯೋಜಕಿ ಸುರೇಖಾ ಪಾಟೀಲ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 