ಲವ್ ಜಿಹಾದ್, ಪಾಲಕರು ಮಕ್ಕಳ ಬಗ್ಗೆ ಇರಲಿ ಜಾಗೃತಿ: ಶೇಕರಗೌಡ
Love Jihad, parents should be aware of their children: Shekar Gowda
ಲೋಕದರ್ಶನ ವರದಿ
ದೇವರಹಿಪ್ಪರಗಿ 14 : ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಪೋಷಕರು ತಮ್ಮ ಹೆಣ್ಣು ಮಕ್ಕಳ ಕಡೆಗೆ ವಿಶೇಷ ಗಮನ ಹರಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಧರ್ಮಚಾರ್ಯ ಸಂಪರ್ಕ ಸಹ ಪ್ರಮುಖರಾದ ಶೇಖರಗೌಡ ಹರನಾಳ ಹೇಳಿದರು. ಪಟ್ಟಣದಲ್ಲಿ ಶನಿವಾರದಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು,ಪ್ರತಿ ವರ್ಷ 60 ಸಾವಿರಕ್ಕಿಂತ ಹೆಚ್ಚು ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗುತ್ತಿದ್ದು ಅಲ್ಲದೆ ಮತಾಂತರಕ್ಕೆ ಒಳಗಾಗುತ್ತಿದ್ದಾರೆ ಈ ವಿಷಯ ಇಡೀ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಘಂಟೆ ಇದನ್ನು ಅರಿತು ನಮ್ಮ ನಮ್ಮ ಮನೆಯಲ್ಲಿಯೇ ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವುದು ತಂದೆ ತಾಯಿಯರ ಕರ್ತವ್ಯವಾಗಿದೆ.
ಹಾಗೆ ಮೋಸದ ಮತಾಂತರಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕು ಹಾಗೂ ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿವೆ ಮತ್ತು ಬರುತ್ತಿದೆ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಹಿಂದೂ ಹೆಣ್ಣು ಮಕ್ಕಳೇ ಅತಿ ಹೆಚ್ಚು ಲವ್ ಜಿಹಾದಿಗೆ ಬಲಿಯಾಗುತ್ತಿದ್ದಾರೆ ಏಕೆಂದರೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಮೇಲೆ ನಮ್ಮ ಹಿಂದೂ ಹೆಣ್ಣು ಮಕ್ಕಳಿಗೆ 18 ಪ್ರಾಯ ತುಂಬುತ್ತದೆ ಮದುವೆ ವಿಚಾರಯಾಗಿ ಸ್ವತಂತ್ರ ನಿರ್ದಾರ ತೆಗೆದುಕೊಳ್ಳುವ ಹಕ್ಕು ಅವರ ಕೈಯಲ್ಲಿ ಇರುತ್ತದೆ ಅದಕ್ಕಾಗಿಯೇ ಪಿಯುಸಿ ಮುಗಿಸಿದ ವಿದ್ಯಾರ್ಥಿನಿಯರೇ ಹೆಚ್ಚಿಗೆ ಲವ್ ಜಿಹಾದಿಗೆ ಒಳಗಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಾರೆ ಆದ್ದರಿಂದ ಪೋಷಕರು ಎಚ್ಚರ ವಹಿಸಬೇಕಿದೆ ಇಂತಹ ಮತಾಂತರದ ಹೆಸರಿನಲ್ಲಿ ನಡೆಯುವ ಪ್ರಕರಣದಲ್ಲಿ ಸಿಲುಕಿಕೊಂಡರೆ ಅಂತ ಹೆಣ್ಣು ಮಕ್ಕಳನ್ನು ಹೊರಗೆ ತರುವುದು ಅಸಾಧ್ಯ ಮತ್ತು ಮತಾಂತರ ಭೀಕರತೆ ಬಗ್ಗೆ ನಮ್ಮ ಹಿಂದೂ ಹೆಣ್ಣು ಮಕ್ಕಳಿಗೆ ಅರ್ಥವಾಗಬೇಕಾದರೆ ಈಗ ಬಂದಿರುವ ಕೇರಳ ಸ್ಟೋರಿ ಭಾಗ-2 ಚಲನ ಚಿತ್ರ ತೋರಿಸಿ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 