770 ಅಮರಗಣಾಧೀಶ ಲಿಂಗ ದೇವಸ್ಥಾನಕ್ಕೆ ಎಂ. ಬಿ. ಪಾಟೀಲ ಭೇಟಿ
M. B. Patil visits 770 Amaraganadheesha Linga temple
ವಿಜಯಪುರ 16: ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ಮುಸ್ಸಂಜೆ ನಗರದ ಐತಿಹಾಸಿಕ 770 ಅಮರಗಣಾಧೀಶ ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸಮಸ್ತ ಜನತೆಯ ಒಳಿತು ಬಯಸಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ 770 ಅಮರಗಣಂಗಳು (ಶರಣರು) ಕಾಯಕಯೋಗಿ ಬಸವೇಶ್ವರ ಜೊತೆಗೂಡಿ, ಸಮಾನತೆಗಾಗಿ ಶ್ರಮಿಸಿದ್ದರು. ಸಾಧಕರ ಶರಣರು ನೀಡಿದ ಕೊಡುಗೆಯ ಸ್ಮರಣಾರ್ಥ ಅವರ ಹೆಸರಿನಲ್ಲಿಯೇ ಬಂಥನಾಳ ಶ್ರೀ ಸಂಗನಬಸವ ಮಹಾಶಿವಯೋಗಿಗಳ ದಿವ್ಯ ಸಂಕಲ್ಪದಂತೆ 1954 ರಲ್ಲಿ ವಿಜಯಪುರ ನಗರದ 770 ಅಮರ ಗಣಾಧೀಶ್ವರರ(ಅಮರಗಣಂಗಳ) ಸ್ಮಾರಕ ಲಿಂಗಗಳ ಪ್ರತಿಷ್ಠಾಪನೆಯಾಗಿ 1960ರಲ್ಲಿ ದೇವಸ್ಥಾನ ಲೋಕಾರ್ಪಣೆಯಾಗಿತ್ತು. ಸುಮಾರು ಏಳು ದಶಕಗಳ ನಂತರ 2024ರಲ್ಲಿ ರೂ. 1.51 ಕೋ. ವೆಚ್ಚದಲ್ಲಿ ಸಂಪೂರ್ಣವಾಗಿ ನವೀಕರಿಸಿ ಶಿವರಾತ್ರಿಯ ದಿನದಂದು ಮರು ಲೋಕಾರೆ್ಣಗೊಳಿಸುವ ಸದವಕಾಶ ತಮಗೆ ಲಭ್ಯವಾಗಿತ್ತು. ದೇವರ ದೇವ ಮಹದೇವನ, ಬಸವಣ್ಣನವರ ಹಾಗೂ ಎಲ್ಲ ಶರಣರ ಅನುಗ್ರಹ ಮತ್ತು ಆಶೀರ್ವಾದ ಸದಾಕಾಲ ನಮ್ಮೆಲ್ಲರ ಮೇಲೆ ಇರಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಗಠಾಣಾ ಶಾಸಕರಾದ ವಿಠ್ಠಲ ಕಟಕಧೋಂಡ ಅವರು ಜೊತೆಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 