ಕುರುಬರ ಸಂಘ ; ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಂ.ತಿಮ್ಮಪ್ಪ ಆಯ್ಕೆ
M. Thimmappa elected as Ballari District President of the Kurubara Sangha
ಬಳ್ಳಾರಿ. ಸೆ. 03 : ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ಬಳ್ಳಾರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ 17ನೇ ವಾರ್ಡ್ನ ಬಿ.ಗೋನಾಳ್ ನಿವಾಸಿ ಎಂ.ತಿಮ್ಮಪ್ಪ ಅವರನ್ನು ಆಯ್ಕೆ ಮಾಡಿ ಕರ್ನಾಟಕ ರಾಜ್ಯ ಕುರುಬರ ಸಂಘ (ರಿ.), ಬೆಂಗಳೂರು ರಾಜ್ಯ ಸಮಿತಿಯು ಆಗಸ್ಟ್ 31ರಂದು ನೇಮಕಾತಿ ಆದೇಶ ಹೊರಡಿಸಿದ್ದು, ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಚಟುವಟಿಕೆಗಳನ್ನು ಮುನ್ನಡೆಸುವಂತೆ ಸೂಚಿಸಿದೆ. ಈ ಕುರಿತು ಮಾತನಾಡಿದ ಎಂ.ತಿಮ್ಮಪ್ಪ, ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ರಾಜ್ಯಾಧ್ಯಕ್ಷ ಪ್ರಭುರಂಗ ದೊಡ್ಡೇರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಅವರು ನನ್ನ ಮೇಲೆ ವಿಶ್ವಾಸವಿಟ್ಟು ಬಳ್ಳಾರಿ ಜಿಲ್ಲಾಧ್ಯಕ್ಷರ ಜವಾಬ್ದಾರಿ ನೀಡಿದೆ.
ಇದು ನನಗೆ ದೊರೆತ ಗೌರವಕ್ಕಿಂತಲೂ ದೊಡ್ಡ ಜವಾಬ್ದಾರಿಯಾಗಿದೆ. ಜಿಲ್ಲೆಯ ಕುರುಬ ಸಮಾಜದ ಎಲ್ಲರನ್ನು ಒಗ್ಗೂಡಿಸಿ ಸಂಘಟನೆಯನ್ನು ಬಲಪಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು. ಸಮುದಾಯದ ಯುವಜನರಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳ ಕುರಿತು ಅರಿವು ಮೂಡಿಸುವುದು, ಸಮಾಜದ ಅರ್ಹರಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳುವುದು ಹಾಗೂ ಸಮಾಜದ ನ್ಯಾಯಯುತ ಬೇಡಿಕೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವ ಕೆಲಸ ಮಾಡಲಾಗುವುದು. ತಾಲ್ಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿಯೂ ಸಂಘಟನೆಯನ್ನು ವಿಸ್ತರಿಸಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇನೆ” ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 