ಎಂ.ಆರ್ ಕುಂಬಾರ ಭಾವಚಿತ್ರಕ್ಕೆ ಹೊರಕೇರಿ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಗೌರವ ನಮನ
M.R. Kumbara's portrait is paid homage by the Urakeri Education Foundation
ಹುಬ್ಬಳ್ಳಿ 16: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಪ್ರೊ. ಎಸ್.ಎಲ್ ಸಂಗಮ ಅವರ ಮನೆಯಲ್ಲಿ. ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ, ಗ್ರಂಥಾಲಯ ವಿಜ್ಞಾನ ವಿಷಯದಲ್ಲಿ ವಿವಿಧ ಕೋರ್ಸ್ ಗಳ ಪ್ರಾರಂಭಕ್ಕೆ ಕಾರಣಿಕರ್ತರಾದ ಪ್ರೊ ಎಂ. ಆರ್ ಕುಂಬಾರ ಅವರ ಜನ್ಮ ಶತಮಾನೋತ್ಸವದ ನಿಮಿತ್ ಪ್ರೊ. ಎಂ.ಆರ್ ಕುಂಬಾರ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಮಾಲಾರೆ್ಣ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ಕರ್ನಾಟಕ ವಿಶ್ವವಿದ್ಯಾಲಯ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ನಿವೃತ್ ಪ್ರಾಧ್ಯಾಪಕ ಡಾ. ಎಸ್.ಎಲ್. ಸಂಗಮ ಅವರ 75ನೇ ಜನ್ಮದಿನೋತ್ಸವ ಶುಭ ಸಂದರ್ಭದಲ್ಲಿ, ವಿದ್ಯಾ ಗುರುಗಳಾದ ಪ್ರೊ ಎಸ್.ಎಲ್.ಸಂಗಮ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶಾಲು, ಮಾಲಾರೆ್ಣ ಮಾಡಿ, ಗ್ರಂಥ ನೀಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಅಭಿನಂದಿಸಿ, ಶುಭ ಕೋರಿದರು.
ಹಿರಿಯರಾದ ಶಶಿಕಲಾ ಸಂಗಮ, ವರೂರು ಎಜಿಎಂ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಪಾಲಕ ಮಾರುತಿ ತಲಗೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಇದ್ದರು.
ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು 30 ವರ್ಷಗಳ ಹಿಂದೆ ಕರ್ನಾಟಕ ವಿಶ್ವವಿದ್ಯಾಲಯ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾಗ ಡಾ. ಎಸ್.ಎಲ್. ಸಂಗಮ ಅವರು ಪ್ರಾಧ್ಯಾಪಕರಾಗಿದ್ದರು. ಸರ್ ಅವರ ಪ್ರೀತಿಯ ವಿದ್ಯಾರ್ಥಿಯಾಗಿದ್ದರು. ಸರ್ ಅವರು ಸುರೇಶ್ ಅವರಿಗೆ ಸದಾವಕಾಲ್ ಪ್ರೀತಿಯಿಂದ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ. ಸದಾ ಒಳ್ಳೆಯದನ್ನೇ ಬಯಸುತ್ತಾ ಅವರ ಕಾರ್ಯಚಟುವಟಿಕೆಗಳಿಗೆ ಸಂತಸ ವ್ಯಕ್ತಪಡಿಸುತ್ತಾ, ಬೆಂಬಲ ನೀಡುತ್ತ ಬಂದಿದ್ದಾರೆ. ಸುರೇಶ ಅವರು ಸಹ ಗುರುಗಳಿಗೆ ಸದಾ ಶ್ರದ್ಧಾ, ಭಕ್ತಿಯಿಂದ ಗೌರವದಿಂದ ಕಾಣುತ್ತಾ ಬಂದಿದ್ದು, ಸದಾ ಗುರುಗಳು ನೀಡಿದ ಪ್ರೋತ್ಸಾಹ ವನ್ನು ಸ್ಮರಿಸುತ್ತಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 