ಎಂ.ಎಸ್. ಕರಡಿ ಮಹಾಪೌರರಾಗಿ ಆಯ್ಕೆ
M.S. Karadi elected as Mayor
ವಿಜಯಪುರ 30: ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾಗಿ ಆಯ್ಕೆಯಾದ ಎಂ.ಎಸ್. ಕರಡಿಗೆ ನಗರದ ಸ್ವಪ್ನ ಶ್ರವಣದೋಷವುಳ್ಳ ವಸತಿ ಶಾಲೆಯಲ್ಲಿ ಭಾನುವಾರ ಭವ್ಯ ಸನ್ಮಾನ ಕಾರ್ಯಕ್ರಮ ಜರಗಿತು.
ಗಣೇಶ ಹಬ್ಬದ ಅಂಗವಾಗಿ ಶಾಲೆಯ ಮಕ್ಕಳು ನೃತ್ಯ, ಕಿರು ನಾಟಕ ಹಾಗೂ ಭಕ್ತಿಗೀತೆಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಶ್ರವಣದೋಷವಿದ್ದರೂ ಮಕ್ಕಳ ಕಲಾತ್ಮಕ ಕೌಶಲ್ಯವನ್ನು ಕಂಡು ಹಾಜರಿದ್ದ ಅತಿಥಿಗಳು ಹಾಗೂ ಗಣ್ಯರು ಮಕ್ಕಳ ಪ್ರತಿಭೆಗೆ ಪ್ರಶಸ್ತಿಗಳನ್ನು ನೀಡಿ ಪ್ರಶಂಸಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಿವಾನಂದ ರೇಶ್ಮಿ ವಹಿಸಿಕೊಂಡರು. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತಾ ಬಿರಾದಾರ ಅವರು ಶಾಲೆಯ ಮೂಲಭೂತ ಸೌಕರ್ಯಗಳ ಕೊರತೆ, ವಿಶೇಷವಾಗಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಹಾಪೌರರ ಗಮನ ಸೆಳೆದರು. ಈ ವೇಳೆ ಮಾತನಾಡಿದ ಮಹಾಪೌರ ಎಂ.ಎಸ್. ಕರಡಿ ಅವರು, “ಮಕ್ಕಳಿಗೆ ಯಾವತ್ತೂ ನೀರಿನ ತೊಂದರೆ ಆಗದಂತೆ ಈಗಾಗಲೇ ಬೋರ್ವೆಲ್ ತೋಡಿಸಲು, ನಳ ವ್ಯವಸ್ಥೆ ಕಲ್ಪಿಸಲು ಹಾಗೂ ದೊಡ್ಡ ನೀರಿನ ಟ್ಯಾಂಕ್ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿದ್ದೇನೆ. ಶಾಲೆಯ ಅಗತ್ಯಗಳನ್ನು ಪೂರೈಸಲು ಪಾಲಿಕೆಯು ಬದ್ಧವಾಗಿದೆ,” ಎಂದು ಭರವಸೆ ನೀಡಿದರು.
ಶ್ರವಣದೋಷವುಳ್ಳ ಮಕ್ಕಳಿಗೆ ನೀಡುತ್ತಿರುವ ಸೇವೆ ಶ್ಲಾಘನೀಯವೆಂದು ಸ್ಥಳೀಯರು ಮತ್ತು ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾಪೌರರ ಭರವಸೆಯಿಂದ ಶಾಲೆಯ ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ಅವರು ಹಂಚಿಕೊಂಡರು. ಸನ್ಮಾನ ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪ್ರಭಾಕರ ಬಿರಾದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 