ಹೂವಿನಹಡಗಲಿ 06: ವಿಜಯನಗರ ಮತ್ತು ಬಳ್ಳಾರಿಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಿಂದ ವಿಜಯನಗರ ಜಿಲ್ಲಾ ಬಿಜೆಪಿ ಪಕ್ಷದ ಮುಖಂಡ ಎಂ ಬಿ ಬಸವರಾಜ ಅವರನ್ನು ಮಂಗಳವಾರ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಅನಿಲ್ ನಾಯ್ಡು ವಿಜಯನಗರ ಜಿಲ್ಲಾಧ್ಯಕ್ಷರಾದ ಸಂಜೀವ್ ರೆಡ್ಡಿ. ಎಂ ಬಿ ಬಸವರಾಜ ಅವರನ್ನು ಸನ್ಮಾನಿಸಿ, ಉಭಯ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಹಾಗೂ ಪ್ರಸಕ್ತ ವಿದ್ಯಮಾನಗಳ ಕುರಿತು ಮಾಹಿತಿ ವಿನಿಮಯ ಚರ್ಚೆಗಳನ್ನು ಮಾಡಿದರು. ಈ ಸಂದರ್ಭದಲ್ಲಿ ಶಂಕರ್ ಸೇರಿದಂತೆ ಇತರರಿದ್ದರು.
ನಂತರ ನಮ್ಮ ಪತ್ರಿಕಾಪ್ರತಿನಿಧಿಯೊಂದಿಗೆ ಮಾತನಾಡಿದ ಎಂ ಬಿ ಬಸವರಾಜ ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಗ್ಯಾರಂಟಿ ಯೋಜನೆಗೆ ಸರ್ಕಾರದ ಬಳಿ ಹಣವಿಲ್ಲ ಸಾಲದ ಸುಳಿಗೆ ಸಿಲುಕಿ ಅಭಿವೃದ್ಧಿ ಜಪ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಹೊಸದಾಗಿ ಮನೆ ಕಟ್ಟಿದವವರಿಗೆ, ಬಾಡಿಗೆ ಮನೆ ಬದಲಾಯಿಸಿದವರಿಗೆ ಗೃಹಯೋಜನೆಯ ಪೂರ್ಣ ಲಾಭ ಸಿಗುತ್ತಲೇ ಇಲ್ಲ. ಒಟ್ಟಿನಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಮಕ್ಕಲ್ ಟೋಪಿ ಹಾಕುತ್ತಿದ್ದಾರೆ. ಎಂದು ಬಿಜೆಪಿ ಪಕ್ಷದ ಮುಖಂಡ ಎಂ ಬಿ ಬಸವರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.