ಸಾರ್ವಜನಿಕ ಆಸ್ಪತ್ರೆ ಅಬಿವೃದ್ದಿ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole drive for public hospital development work
ರಾಯಬಾಗ, 12 ; ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ದೊರಕಬೇಕೆಂದು ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತಿಕರಿಸಿ, ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆಯವರು ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮೂಲ ಸೌಕರ್ಯಗಳನ್ನು ಉನ್ನತೀಕರಿಸಲು ಆರೋಗ್ಯ ಇಲಾಖೆಯಿಂದ ಮಂಜೂರಾದ 84ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕು ಕೇಂದ್ರ ಸ್ಥಾನವಾದ ರಾಯಬಾಗ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದರಿಂದ ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹೇಳಿದರು.
ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಚ್.ರಂಗಣ್ಣವರ, ಡಾ.ಸದಾಶಿವ ಖನದಾಳೆ, ನಂದಕುಮಾರ ಪಾಟೀಲ, ಸದಾಶಿವ ಘೋರೆ್ಡ, ಸಂಗಣ್ಣ ದತ್ತವಾಡೆ, ಸದಾನಂದ ಹಳಿಂಗಳಿ, ಸುರೇಶ ಮಾಳಿ, ಶ್ರೀಶೈಲ ಶಿರೂರ, ಪರಶುರಾಮ ಪೂಜಾರಿ, ಮಹೇಶ ಕರಮಡಿ, ಭಾರತಿ ಲೋಹಾರ, ಮಾರುತಿ ಬಂತೆ, ರೀತೇಶ ಅವಳೆ, ರಂಜಾನ ಮಕಾನದಾರ ಹಾಗೂ ಆಸ್ಪತ್ರೆ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 