ತಹಶಿಲ್ದಾರ ಕಚೇರಿ ಕಟ್ಟಡ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole launches construction of Tahsildar office building
ರಾಯಬಾಗ, 19 : ಸರ್ಕಾರಿ ಇಲಾಖೆಗಳ ಸೌಲಭ್ಯಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಲಭ್ಯವಾಗಲು ಪಟ್ಟಣದ ತಾಲೂಕು ಆಡಳಿತ ಕಚೇರಿ(ತಹಶಿಲ್ದಾರರ ಕಚೇರಿ)ಯ ಮೊದಲನೆ ಮಹಡಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಗುರುವಾರ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರೂ.1 ಕೋಟಿ ಅನುದಾನದಲ್ಲಿ ಪಟ್ಟಣದ ತಹಶೀಲ್ದಾರ ಕಚೇರಿಯ ಮೊದಲನೆ ಮಹಡಿ ಕಟ್ಟಡ ನಿರ್ಮಾಣ, ಕೌಂಪೌಂಡ ಗೋಡೆ, ನೆಲಮಹಡಿ ಕಟ್ಟಡ ನಿರ್ವಹಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಹಶೀಲ್ದಾರ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಬೇಕಾದ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ತಹಶೀಲ್ದಾರ ಸುರೇಶ ಮುಂಜೆ, ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ಎಇಇ ಆರಿ್ಬ.ಮನವಡ್ಡರ, ಸಿ.ಎಸ್.ಕಾಂಬಳೆ, ಪರಮಾನಂದ ಮಂಗಸೂಳಿ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಸುರೇಶ ಮಾಳಿ, ಮಹೇಶ ಕರಮಡಿ, ಸದಾನಂದ ಹಳಿಂಗಳಿ, ವಿಶ್ವನಾಥ ಹಾರೂಗೇರಿ, ಸೋಮಶೇಖರ ಜೋರೆ, ನಿಂಗಪ್ಪ ಪಕಾಂಡಿ, ಭಾರತಿ ಲೋಹಾರ, ಸುಭಾಸ ಕಾಂಬಳೆ ಸೇರಿ ತಹಶೀಲ್ದಾರ ಕಚೇರಿ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 