ಮಾಜಿ ಸೈನಿಕರ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಅಶೋಕ್ ಮನಗೂಳಿ ಚಾಲನೆ
MLA Ashok Managuli inaugurates the construction of the ex-servicemen's community hall
ಲೋಕದರ್ಶನ ವರದಿ
ಸಿಂಧಗಿ 30: ದೇಶದ ಗಡಿಯಲ್ಲಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಮಾಜಿ ಸೈನಿಕರ ಗೌರವಾರ್ಥ ಹಾಗೂ ಅವರ ಸಮುದಾಯದ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಾಣ ಅಗತ್ಯವಾಗಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.
ನಗರದ ವಿಜಯಪುರ ರಸ್ತೆಯಲ್ಲಿರುವ ಮಾಂಗಲ್ಯ ಭವನದ ಹಿಂಭಾಗದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ?25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮಾಜಿ ಸೈನಿಕರ ಸಮುದಾಯ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕಳೆದ ಒಂದು ವರ್ಷದ ಹಿಂದೆ 25 ಲಕ್ಷ ಅನುದಾನದಲ್ಲಿ ಭವನ ನಿರ್ಮಿಸಿಕೊಡುವುದಾಗಿ ನೀಡಿದ್ದ ಭರವಸೆಯಂತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿಗಳು ಶಾಸಕರಿಗೆ ನೀಡಿರುವ ಅನುದಾನವನ್ನು ದೇಶಾಭಿಮಾನಿಗಳ ಹಾಗೂ ಜನೋಪಯೋಗಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಈ ಅನುದಾನವನ್ನು ಉತ್ತಮ ಕಾರ್ಯಗಳಿಗೆ ಬಳಸುವುದು ತಮ್ಮ ಆಶಯವಾಗಿದೆ ಎಂದು ಹೇಳಿದರು.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಈ ಭವನವು ಕ್ಷೇತ್ರದಲ್ಲಿರುವ ಸುಮಾರು 125 ಮಾಜಿ ಸೈನಿಕರಿಗೆ ಅನುಕೂಲವಾಗಬೇಕು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಬೆಂಗಳೂರು ಉಪ ಜಿಲ್ಲಾ ನಿರ್ದೇಶಕ ಕನಕರಾಜ ವಡ್ಡರ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಶೈಲ ಯಳಮೇಲಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಿ.ಬಿ. ಕುರುಡಿ, ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ ಸೇರಿದಂತೆ ವಿವಿಧ ಮುಖಂಡರು, ಮಾಜಿ ಸೈನಿಕರು ಉಪಸ್ಥಿತರಿದ್ದರು. ಎಸ್.ಬಿ. ಕಾರಿಮುಂಗಿ ಕಾರ್ಯಕ್ರಮ ನಿರ್ವಹಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 