ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಆಸೀಫ್ ಸೇಠ
MLA Asif Seth distributes three-wheelers to the disabled
ಬೆಳಗಾವಿ 25: ವಿಕಲಚೇತನರು ಹಿಂಜರಿಯದೆ ಸವಾಲುಗಳನ್ನು ಎದುರಿಸಿ : ಶಾಸಕ ಆಸೀಫ್ ಸೇಠ್ಬೆಳಗಾವಿ : ವಿಕಲಚೇತನರಲ್ಲಿ ವಿಶೇಷವಾದ ಶಕ್ತಿ ಇದ್ದು, ಅವರು ಯಾವುದೇ ಕಾರಣಕ್ಕೂ ಭಯದಿಂದ ಹಿಂಜರಿಯದೆ ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸಿ ಬದುಕು ರೂಪಿಸಿಕೊಳ್ಳಬೇಕೆಂದು ಶಾಸಕ ಆಸೀಫ್ ಸೇಠ್ ಹೇಳಿದರು. ಗುರುವಾರ ಮಹಾನಗರ ಪಾಲಿಕೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆಯ ಬಡತನ ನಿರ್ಮೂಲನ ಕೋಶದಿಂದ ಶೇ.5 ಅನುದಾನದ ಯೋಜನೆಯಡಿ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರ ಹಾಗೂ ಪಾಲಿಕೆ ವಿಕಲಚೇತನರಿಗಾಗಿ ಅನೇಕ ಯೋಜನೆಗಳನ್ನು ತಂದಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮೇಯರ್ ಪ್ರೀತಿ ಕಾಮಕರ ಮಾತನಾಡಿ, ಪಾಲಿಕೆಯು ವಿಕಲಚೇತನರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ತಂದಿದೆ. ಅದರ ಅಡಿಯಲ್ಲಿ ತ್ರಿಚಕ್ರ ವಾಹನಗಳನ್ನು ನೀಡುತ್ತಿದ್ದು , ಅವುಗಳಿಂದ ತಾವು ಸ್ವಾವಲಂಬಿಗಳಾಗಿ ಜೀವಿಸಲು ಅನುಕೂಲವಾಗಲಿದೆ ಎಂದು ಹೇಳಿದರು. ಉಪಮೇಯರ್ ಹಣಮಂತ ಕೊಂಗಾಲಿ ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಮುಂದೆಯೂ ಸಹ ವಿವಿಧ ಯೋಜನೆಗಳ ಅಡಿಯಲ್ಲಿ ಪಾಲಿಕೆಯಿಂದ ಸಹಾಯ ಸಹಕಾರ ಲಭ್ಯವಾಗಲಿದೆ ಎಂದು ಹೇಳಿದರು. ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಮಾತನಾಡಿ, ಪಾಲಿಕೆಯ ಅನುದಾನದ ಶೇ.5 ಯೋಜನೆ ಅಡಿ ಒಟ್ಟು 26 ಅರ್ಹ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರವಾಹನ ನೀಡಲಾಗುತ್ತಿದೆ. ಪಾಲಿಕೆಯ ಸದುದ್ದೇಶವನ್ನು ಫಲಾನುಭವಿಗಳು ಸಾಕಾರಗೊಳಿಸಿಕೊಳ್ಳಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರ ವಿಭಾಗದ ಅರ್ಜಿ ಸ್ವೀಕೃತಿ ಹಾಗೂ ಸಹಾಯ ಕೇಂದ್ರವನ್ನು ಶಾಸಕರು,ಮೇಯರ್ ಉಪಮೇಯರ್ ಉದ್ಘಾಟಿಸಿದರು. ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೆಕರ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಲಕ್ಷ್ಮಿ ರಾಥೋಡ್, ಮಾಧವಿ ರಾಘೋಚೆ, ಬ್ರಹ್ಮಾನಂದ ಮಿರಜಕರ್ , ಸಮಿತಿ ಸದಸ್ಯರು ಹಾಗೂ ನಗರಸೇವಕರು ವೇದಿಕೆಯಲ್ಲಿದ್ದರು. ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ಟಿ. ಸ್ವಾಗತಿಸಿ ವಂದಿಸಿದರು. ಕಂದಾಯ ವಿಭಾಗದ ಉಪ ಆಯುಕ್ತ ಡಾ.ಸಿದ್ದು ಹುಲ್ಲೋಳಿ, ಪಾಲಿಕೆ ಕಾರ್ಯದರ್ಶಿ ಲಕ್ಷ್ಮೀ ನಿಪ್ಪಾಣಿಕರ್, ಪರಿಸರ ವಿಭಾಗದ ಅಭಿಯಂತರ ಹಣಮಂತ ಕಲಾದಗಿ ಸೇರಿದಂತೆ ಇತರೆ ಅಧಿಕಾರಿಗಳು , ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 