ಲೋಕದರ್ಶನವರದಿ
ಬ್ಯಾಡಗಿ೦೩: ತಮ್ಮ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಾವೇರಿ ತಾಲೂಕಿನ ನಾಗನೂರು ಮತ್ತು ಬೆಂಚಿಹಳ್ಳಿಗೆ ಹೋಗುವ ರಸ್ತೆ ಮಾರ್ಗ ಮತ್ತು ಸೇತುವೆಯ ನಿಮರ್ಾಣ ಕಾಮಗಾರಿಯು ಹಲವಾರು ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದು ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ರಸ್ತೆಗೆ ಸಂಬಂಧಿಸಿದಂತೆ ರೈತರ ಜಮೀನನ್ನು ಖರೀದಿಸಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ಕೈಗೊಳ್ಳುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಕುರಿತು ಮಂಗಳವಾರ ಹಾವೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚಚರ್ಿಸಿದ ಅವರು ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾಗಿರುವ ರಸ್ತೆ ಹಾಗೂ ಸೇತುವೆ ನಿಮರ್ಾಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ತಾವು ದೇವಗಿರಿ ಜಿ ಪಂ ಸದಸ್ಯವಿರುಪಾಕ್ಷಪ್ಪ ಕಡ್ಲಿ ಮತ್ತು ಎಪಿಎಂಸಿ ಉಪಾಧ್ಯಕ್ಷ ಸಣ್ಣಪ್ಪ ಮಾಳ್ಳಿ ಸೇರಿದಂತೆ ಗ್ರಾಮದ ಹಿರಿಯರ ಸಹಕಾರದೊಂದಿಗೆ ರಸ್ತೆ ನಿಮರ್ಾಣದ ವ್ಯಾಪ್ತಿಯಲ್ಲಿ ಬರುವ ಸಂಬಂಧಿಸಿದ ರೆತರಿಂದ ಜಮೀನನ್ನು ಜಿಲ್ಲಾಡಳಿತದಿಂದ ನೇರವಾಗಿ ಖರೀದಿ ಮಾಡುವ ಮೂಲಕ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಶಾಸಕರ ಮನವಿಯನ್ನು ಸ್ವೀಕರಿಸಿರುವ ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ಅವರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.