ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಬಳ್ಳಾರಿ ಚಾಲನೆ

ಬ್ಯಾಡಗಿ: ಪಟ್ಟಣದ ಹಳೇ ಪುರಸಭೆಯ ಹತ್ತಿರ ಪೌರತ್ವ ಕಾಯ್ದೆ 2019 ಬೆಂಬಲಿಸಿ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವ ಮೂಲಕ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ಮಂಗಳವಾರ ರಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದಕರ ವಿಷಯವಾಗಿದೆ ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮುರಿಗೆಪ್ಪ ಶೆಟ್ಟರ, ಶಿವಬಸಪ್ಪ ಕುಳೇನೂರ, ಸುರೇಶ ಯತ್ನಳ್ಳಿ, ಪುರಸಭೆ ಸದಸ್ಯ ಬಾಲುಗೌಡ್ರ ಪಾಟೀಲ, ತಾಬಿಜೆಪಿ ಅಧ್ಯಕ್ಷ ಸುರೇಶ ಆಸಾದಿ, ನಾಗರಾಜ ಹಾವನೂರು, ವಿಷ್ಣುಕಾಂತ್ ಬೆನ್ನೂರ, ಶೇಖಪ್ಪ ಗಡಾದ ಹಾಗೂ ಇನ್ನಿತರರು ಉಪಸ್ಥಿತರಿದ್ದರು.