70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪತ್ರಕರ್ತರನ್ನು ಸತ್ಕರಿಸಿದ ಶಾಸಕ ಡಿ.ಎಮ್.ಐಹೊಳೆ
MLA D.M. Aihole entertained journalists at the 70th Karnataka Rajyotsava ceremony
70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪತ್ರಕರ್ತರನ್ನು ಸತ್ಕರಿಸಿದ ಶಾಸಕ ಡಿ.ಎಮ್.ಐಹೊಳೆ
ರಾಯಬಾಗ 02: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಗಳನ್ನು ಗೌರವಿಸೋಣ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶನಿವಾರ ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದರ ಜೊತೆಗೆ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.ಮಕ್ಕಳ ಸಾಹಿತಿ ಡಾ.ಲಕ್ಷ್ಮಣ ಚೌರಿ ಅವರು ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಕುರಿತು ಉಪನ್ಯಾಸ ನೀಡಿದರು. ತಹಶೀಲ್ದಾರ ಮಹಾದೇವ ಸನಮುರಿ ಅವರು ಧ್ವಜಾರೋಹಣ ನೆರವೇರಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಪ.ಪಂ.ಅಧ್ಯಕ್ಷ ಅಶೋಕ ಅಂಗಡಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರ್ಜುನ ಬಂಡಗರ, ತಾ.ಪಂ.ಇಒ ಡಾ.ಸುರೇಶ ಕದ್ದು, ಸಿಪಿಐ ಬಿ.ಎಸ್.ಮಂಟೂರ, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಮ್.ಪಾಟೀಲ, ವಿನೋದ ಮಾವರಕರ, ವಿ.ಎಸ್.ಚಂದರಗಿ, ಸುಭಾಷ ಭಜಂತ್ರಿ, ರವೀಂದ್ರ ಪಾಟೀಲ, ಡಾ.ಎಮ್.ಬಿ.ಪಾಟೀಲ, ಆರಿ್ಬ.ಮನವಡ್ಡರ, ಭಾರತಿ ಕಾಂಬಳೆ, ಕಲ್ಪನಾ ಕಾಂಬಳೆ, ಬಸವರಾಜ ಕಾಂಬಳೆ, ಸುರೇಶ ಮಲಾಜಿ, ವಿನಾಯಕ ಭಾಟೆ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.ಬಿಇಒ ಬಸವರಾಜಪ್ಪ ಆರ್ ಸ್ವಾಗತಿಸಿದರು, ದೈಹಿಕ ಪರೀವೀಕ್ಷಕ ಎಮ್.ಪಿ.ಜೀರಗ್ಯಾಳ ನಿರೂಪಿಸಿದರು.ಬೆಳ್ಳಿಗ್ಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಮಹಾದೇವ ಮಂಗಲ ಕಾರ್ಯಾಲಯದವರೆಗೆ ವಾದ್ಯಮೇಳದೊಂದಿಗೆ ಕನ್ನಡ ತಾಯಿ ಭುವನೇಶ್ವರ ಭಾವಚಿತ್ರ ಮೆರವಣಿಗೆ ನಡೆಯಿತು.ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು, ಸಾಹಿತಿಗಳನ್ನು ಮತ್ತು ಪತ್ರಕರ್ತರನ್ನು ಸತ್ಕರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 