ಮೂಲಭೂತ ಸೌಕರ್ಯ ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ
MLA DM Aihole launches development work to provide basic infrastructure
ರಾಯಬಾಗ 08: ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಪಟ್ಟಣದ ಸರ್ಕಾರಿ ಕೇಂದ್ರ ಶಾಲೆ ಹಾಗೂ ತಾಲೂಕು ಕ್ರೀಡಾಂಗಣಕ್ಕೆ ಬೇಕಾದ ಎಲ್ಲ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.ಬುಧವಾರ ಜಿ.ಪಂ.ಇಲಾಖೆಯಿಂದ ಮಂಜೂರಾದ 40 ಲಕ್ಷ ರೂ. ಅನುದಾನದಲ್ಲಿ ಪಟ್ಟಣದ ಸರ್ಕಾರಿ ಕೇಂದ್ರ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿ ಹಾಗೂ 30 ಲಕ್ಷ ರೂ.ಅನುದಾನದಲ್ಲಿ ತಾಲೂಕು ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಕ್ರೀಡಾಪಟುಗಳ ಮತ್ತು ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾಗಿದ್ದ ತಾಲೂಕು ಕ್ರೀಡಾಂಗಣಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿದ್ದು, ಗುತ್ತಿಗೆದಾರ ಗುಣಮಟ್ಟದಿಂದ ಕಾಮಗಾರಿ ಮಾಡಬೇಕೆಂದು ಹೇಳಿದರು.
ಜಿ.ಪಂ.ಎಇ ಎಸ್.ಎಸ್.ಹೊಸಮನಿ, ಮುಖ್ಯ ಶಿಕ್ಷಕಿ ಎಮ್.ವಿ.ಪಟ್ಟಣ, ಬಿಇಒ ಬಸವರಾಜಪ್ಪ ಆರ್., ದೈಹಿಕ ಪರೀವೀಕ್ಷಕ ಎಮ್.ಪಿ.ಜಿರಗ್ಯಾಳ, ಮುಖಂಡರಾದ ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಮಹೇಶ ಕರಮಡಿ, ಎನ್.ವಿ.ಮಠದಕರ, ಸುರೇಶ ಮಾಳಿ, ಜಿಯಾವುಲ್ಲ ಮುಲ್ಲಾ, ಲಕ್ಷ್ಮಣ ಬಂಡಗರ, ರಾಜು ಮೊಮಿನ, ಎಸ್.ಎಸ್.ಗೆನ್ನೆನ್ನವ್ವರ, ಮಹೇಶ ಕುಲಗುಡೆ, ಮೋಹನ ರಾಜಮಾನೆ, ಅನೀಲ ಕೊರವಿ ಸೇರಿ ಅನೇಕರು ಇದ್ದರು.ಫೋಟೊ: 08 ರಾಯಬಾಗ 1ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಸರ್ಕಾರಿ ಕೇಂದ್ರ ಶಾಲೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಚಾಲನೆ ನೀಡಿದರು. ಎಸ್.ಎಸ್.ಹೊಸಮನಿ, ಎಮ್.ವಿ.ಪಟ್ಟಣ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಮಹೇಶ ಕರಮಡಿ, ಎನ್.ವಿ.ಮಠದಕರ, ಸುರೇಶ ಮಾಳಿ, ಜಿಯಾವುಲ್ಲ ಮುಲ್ಲಾ, ರಾಜು ಮೊಮಿನ, ಮಹೇಶ ಕುಲಗುಡೆ, ಮೋಹನ ರಾಜಮಾನೆ, ಅನೀಲ ಕೊರವಿ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 