ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಭೂಮಿ ಪೂಜೆ
MLA DM Aihole performs Bhoomi Puja for construction of residential houses
ರಾಯಬಾಗ 06: ಸಾರ್ವಜನಿಕ ಆಸ್ತಿ ಮತ್ತು ನಮ್ಮ ರಕ್ಷಣೆಗಾಗಿ ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಠಾಣೆಯ ಆವರಣದಲ್ಲಿ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.ಶುಕ್ರವಾರ ಪಟ್ಟಣದ ಪೊಲೀಸ ಠಾಣೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಪೊಲೀಸ ಗೃಹ ಯೋಜನೆಯಡಿ ಮಂಜೂರಾದ 2 ಕೋಟಿ 70 ಲಕ್ಷ ರೂ. ವೆಚ್ಚದಲ್ಲಿ 12 ಪಿ.ಸಿ. (ಪೊಲೀಸ ಕಾನ್ಸ್ಟೇಬಲ) ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕರು ಮಾತನಾಡಿದರು.
ಅಥಣಿ ಡಿ.ವೈ.ಎಸ್.ಪಿ ಪ್ರಶಾಂತ ಮುನ್ನೊಳ್ಳಿ ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯ ಕಾಪಾಡಲು ಪೊಲೀಸರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸಿದರೆ, ಕಾನೂನು ಬಾಹಿರ ಚಟುವಟಿಕೆ ನಡೆಸುವ ದುಷ್ಟ ಶಕ್ತಿಗಳನ್ನು ಯಶಸ್ಸಿಯಾಗಿ ಮಟ್ಟ ಹಾಕಲು ಸಾಧ್ಯ. ಪೊಲೀಸ ಠಾಣೆ ಆವರಣದಲ್ಲಿ ವಸತಿಗೃಹ ನಿರ್ಮಾಣದಿಂದ ಪೊಲೀಸ ಅಧಿಕಾರಗಳಿಗೆ ಮತ್ತು ಸಿಬ್ಬಂದಿಗೆ ತುಂಬ ಅನುಕೂಲವಾಗಲಿದೆ ಎಂದರು. ಸಿಪಿಐ ಎಮ್.ಎಮ್. ಡಪ್ಪಿನ, ಎಇಇ ವೀರಭದ್ರಯ್ಯ, ಸದಾಶಿವ ಘೋರೆ್ಡ, ಸುಧಾಕರ ರೆಡ್ಡಿ, ನಿಂಗಯ್ಯಾ ಹಿರೇಮಠ, ಪೊಲೀಸ ಸಿಬ್ಬಂದಿಗಳಾದ ರವಿ ಭಜಂತ್ರಿ, ರಾಮು ಘಸ್ತಿ, ಕೆಂಪಣ್ಣ ಡಬಾಜ, ಎಸ್.ಬಿ.ಸೈದಾಪುರ, ರಾಜು ಪಿಂಜಾರ, ಸಂತೋಷ ದೊಡಮನಿ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 