14ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಅವರಿಗೆ ಸನ್ಮಾನ
MLA Doddanagouda Patil felicitated at the 14th District Kannada Literary Conference
ಕುಷ್ಟಗಿ 05: ತಾಲೂಕಿನ ಕೊರಡಕೇರಿ ಗ್ರಾಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಗ್ರಹ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಜಿಲ್ಲಾ ಕಸಾಪ ಹಾಗೂ ತಾಲೂಕು ಕಸಾಪ ಪದಾಧಿಕಾರಿಗಳು ಭೇಟಿ ನೀಡಿ ಮುದೇನೂರುನಲ್ಲಿ ನಡೆಯುವ 14ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಶಾಸಕ ದೊಡ್ಡನಗೌಡ ಪಾಟೀಲ್ ಅವರನ್ನು ಸನ್ಮಾನಿಸಿ ಗೌರವಿಸಿ ಸಮ್ಮೇಳನ ಕುರಿತು ಚರ್ಚೆ ನಡೆಸಿದರು. ಶಾಸಕ ದೊಡ್ಡನಗೌಡ ಪಾಟೀಲ್ ಅವರು ಸಂತೋಷದಿಂದ ಒಪ್ಪಿಕೊಂಡು ಕುಷ್ಟಗಿ ತಾಲೂಕಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿರುವದು ಸಂತಸದ ಸಂಗತಿಯಾಗಿದೆ ಎಂದ ಅವರು ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಬೇಕು ಹಾಗೂ ಇಂದಿನಿಂದಲೆ ಸಮ್ಮೇಳನದ ಎಲ್ಲಾ ಕಾರ್ಯಗಳಿಗೆ ಮುಂದಾಗಬೇಕು ಎಂದು ತಿಳಿಸಿದರು ಈ ಸಮ್ಮೇಳನ ಯಶಸ್ವಿಗೆ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷಶರಣೆಗೌಡ ಪೊಲೀಸ್ ಪಾಟೀಲ, ಜಿಲ್ಲಾ ಕೋಶಾದ್ಯಕ್ಷ ರಮೇಶ ಕುಲಕರ್ಣಿ, ಕುಷ್ಟಗಿ ತಾಲೂಕು ಕಸಾಪ ಅಧ್ಯಕ್ಷ ಲೆಂಕಪ್ಪ ವಾಲಿಕಾರ, ಕಾರ್ಯದರ್ಶಿ ಶರಣಪ್ಪ ಲೈನದ, ಮಾಜಿ ಕಸಾಪ ಅಧ್ಯಕ್ಷರಾದ, ಹನಮೇಶ ಗುಮಗೇರಿ, ರವೀಂದ್ರ ಬಾಕಳೆ, ಚಂದಪ್ಪ ಹಕ್ಕಿ, ಜಿಲ್ಲಾ ಕಸಾಪ ಪ್ರತಿನಿಧಿ ಎಸ್ ಜಿ ಕಡೆಮನಿ, ಪರಶಿವಮೂರ್ತಿ ದೋಟಿಹಾಳ, ನಾಗರಾಜ ಬಡಿಗೇರ ರಾಜಕುಮಾರ ನಾಯಕ, ಶ್ರೀನಿವಾಸ ಕಂಟ್ಲಿ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 