ಶಿಗ್ಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ

ಶಿಗ್ಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ MLA Dr. Chandru Lamani performs the groundbreaking ceremony for the construction of a CC road in Shi
ಲಕ್ಷ್ಮೇಶ್ವರ 27: ತಾಲೂಕಿನ ಶಿಗ್ಗಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆಜೀವಿಕಾ (ಗ್ರಾಮೀಣ) ಮಿಷನ್ ವಿ.ಬಿಜಿ ರಾಮ್   ರಾಮ್ ಜಿ ಯೋಜನೆ ಅಡಿಯಲ್ಲಿ ಗ್ರಾಮದ 3ನೇ ವಾರ್ಡ್ನಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜುಲೈ ತಿಂಗಳಿನಿಂದ ಯೋಜನೆ ಆರಂಭವಾಗಿದ್ದು, ಶಿಗ್ಗಿ ಗ್ರಾಮದಿಂದಲೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.  

ತಾಲೂಕಿನ 14 ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಜಾರಿಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಉದ್ಯೋಗ ಅರಸಿ ಗ್ರಾಮೀಣ ಜನರು ಬೇರೆಡೆಗೆ ವಲಸೆ ಹೋಗದಂತೆ ಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.  
ಎಲ್ಲರಿಗೂ ಕೆಲಸ ದೊರೆಯುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಮುಂದಿನ ವಾರದಿಂದ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಲಿವೆ. ಗ್ರಾಮದಲ್ಲಿನ ಮುಖ್ಯ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಜನರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.  

ಕಾರ್ಯಕ್ರಮದಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ, ಎಡಿ ಕೃಷ್ಣಪ್ಪ ಧರ್ಮರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೂರಕನವರ ಹಾಗೂ ಗ್ರಾಮದ ಮುಖಂಡರಾದ ಶಂಕರ ರಾಗಿ, ಶಂಕರ ಶಿರಹಟ್ಟಿ, ಬಸಣ್ಣ ಕಳಸದ, ಯಲ್ಲಪ್ಪ ತಳವಾರ, ಎಚ್‌.ಎಲ್‌. ಹೂಗಾರ, ರಾಮಣ್ಣ ಲಮಾಣಿ, ಸಂತೋಷ ತಾಂಡಳೆ, ಎಸ್‌.ವಿ. ಹತ್ತಿ, ಈರಣ್ಣ ಅಕೂರ್, ಗಂಗಾಧರ ಮೆಣಸಿನಕಾಯಿ, ಭೀಮಣ್ಣ ಯಂಗಾಡಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.