ಬೀದರ್ ದಕ್ಷಿಣ ಕ್ಷೇತ್ರದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

ಬೀದರ್ ದಕ್ಷಿಣ ಕ್ಷೇತ್ರದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ MLA Dr. Shailendra Beldale's instructions for comprehensive development of villages in Bidar South c

ಬೀದರ್ 25  : ಇಂದು ನಡೆದ ಮಹಾನಗರ ಪಾಲಿಕೆ ಕಚೇರಿಯ ಸಭೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಸ್ತೃತ ಚರ್ಚೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅಮಲಾಪುರ, ಗೋರನಳ್ಳಿ, ಚೊಂಡಿ, ಚೌಳಿ, ಕೋಳಾರ (ಕೆ), ಹಜ್ಜರಗಿ, ಕಮಲಪುರ ಹಾಗೂ ನಿಜಾಂಪುರ ಗ್ರಾಮಗಳು ಹೊಸದಾಗಿ ಮಹಾನಗರ ಪಾಲಿಕೆಗೆ ಸೇರೆ​‍್ಡಗೊಂಡಿರುವ ಹಿನ್ನೆಲೆ, ಈ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಿ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕೆಂದು ತಿಳಿಸಿದರು.

ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕಸ ವಿಲೇವಾರಿ ವ್ಯವಸ್ಥೆಯನ್ನು ಸುಧಾರಿಸಿ, ಪ್ರತಿಯೊಂದು ವಾರ್ಡ್‌ನಲ್ಲಿ ನಿಯಮಿತವಾಗಿ ಸ್ವಚ್ಛತಾ ಕಾರ್ಯ ನಡೆಯುವಂತೆ ಕ್ರಮ ಕೈಗೊಳ್ಳಲು ತಿಳಿಸಲಾಯಿತು. ಸಾರ್ವಜನಿಕರೂ ಸಹ ನಗರ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.ಈ ಗ್ರಾಮಗಳಿಗೆ ಸಮರ​‍್ಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ ತುರ್ತು ಕ್ರಮಗಳ ಮೂಲಕ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಜೊತೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.

ಒಳಚರಂಡಿ ವ್ಯವಸ್ಥೆ ಸುಧಾರಣೆ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳು, ಬೀದಿ ದೀಪಗಳ ದುರಸ್ತಿ ಹಾಗೂ ಹೊಸ ದೀಪಗಳ ಅಳವಡಿಕೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು. ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.ಸಭೆಯಲ್ಲಿ ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟವಾಗಿ ತಿಳಿಸಲಾಯಿತು. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಪರೀಶೀಲಿಸಿ ತಕ್ಷಣ ಪರಿಹಾರ ಒದಗಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಲಾಯಿತು.“ನಗರವನ್ನು ಸ್ವಚ್ಛ, ಸುಂದರ ಹಾಗೂ ಅಭಿವೃದ್ಧಿ ಹೊಂದಿದ ಮಾದರಿ ನಗರವನ್ನಾಗಿ ರೂಪಿಸುವುದು ನಮ್ಮೆಲ್ಲರ ಗುರಿಯಾಗಿದೆ.

ಸರ್ಕಾರ, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿಯ ಕನಸು ನನಸಾಗುತ್ತದೆ” ಎಂದು ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅಭಿಪ್ರಾಯಪಟ್ಟರು.ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮುಕುಲ್ ಜೈನ್ ಅವರು ಸಭೆಯಲ್ಲಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉತ್ತಮಗೊಳಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಒತ್ತು ನೀಡಲಾಗುವುದು ಎಂದರು.ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ, ಸಹಾಯಕ ನಾಗೇಶ್ ಸಿದ್ದಾ.