ಡಾಂಬರೀಕರಣ ಕಾಮಗಾರಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ
MLA Dr. Shailendra Beldale inaugurates the asphalt laying work
ಬೀದರ್, ಆ. 5: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಯಕಾತಪುರ ಗ್ರಾಮದ ಮುಖ್ಯ ರಸ್ತೆಯಿಂದ ಮನ್ನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂ 1.50 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಗುಣಮಟ್ಟದ ರಸ್ತೆ ಸಂಪರ್ಕ ಅತ್ಯಗತ್ಯವಾಗಿದೆ. ರಸ್ತೆ ಅಭಿವೃದ್ಧಿಯಿಂದ ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಉತ್ತೇಜನ ದೊರೆಯಲಿದ್ದು, ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಯಕಾತಪುರ ಹಾಗೂ ಮನ್ನಳ್ಳಿ ಗ್ರಾಮಗಳ ನೂರಾರು ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಈ ರಸ್ತೆಯನ್ನು ಅವಲಂಬಿಸಿದ್ದು, ರಸ್ತೆ ಹದಗೆಟ್ಟಿದ್ದರಿಂದ ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಡಾಂಬರೀಕರಣ ಪೂರ್ಣಗೊಂಡ ಬಳಿಕ ರೈತರಿಗೆ ಉತ್ಪನ್ನ ಸಾಗಾಟ ಸುಲಭವಾಗುವುದರ ಜೊತೆಗೆ ಸಾರಿಗೆ ವೆಚ್ಚವೂ ಕಡಿಮೆಯಾಗಲಿದೆ ಎಂದು ಹೇಳಿದರು.
ಇದೇ ರಸ್ತೆಯನ್ನು ಬಳಸಿಕೊಂಡು ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೆ ಗ್ರಾಮಸ್ಥರಿಗೆ ಆರೋಗ್ಯ ಕೇಂದ್ರಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳನ್ನು ಸುಲಭವಾಗಿ ತಲುಪಲು ನೆರವಾಗಲಿದೆ ಎಂದು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಕೆಲವು ವರ್ಷಗಳಿಂದ ರಸ್ತೆ, ಸೇತುವೆ, ಕುಡಿಯುವ ನೀರು, ಶಾಲಾ ಕಟ್ಟಡಗಳು, ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಭವನಗಳಂತಹ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗದಂತೆ ಅಗತ್ಯ ಅನುದಾನ ಒದಗಿಸಿ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಶಾಸಕರು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮೀಣ ಆರ್ಥಿಕತೆ ಮತ್ತಷ್ಟು ಬಲಿಷ್ಠವಾಗಲಿದೆ. ಕ್ಷೇತ್ರವನ್ನು ಅಭಿವೃದ್ಧಿಯ ಮಾದರಿಯನ್ನಾಗಿಸಲು ಜನರ ಸಹಕಾರದೊಂದಿಗೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು.
ಗ್ರಾಮದ ಹಿರಿಯರಾದ ಬಸವರಾಜ ಅಮ್ಮಣ್ಣ ಮಾತನಾಡಿ, ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆ ಇದೀಗ ಡಾಂಬರೀಕರಣಗೊಳ್ಳುತ್ತಿರುವುದು ಗ್ರಾಮಸ್ಥರಿಗೆ ಸಂತಸದ ವಿಷಯವಾಗಿದೆ. ಈ ಕಾಮಗಾರಿಯಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಶಾಸಕರಿಗೆ ಗ್ರಾಮಸ್ಥರ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಸವರಾಜ ಅಮ್ಮಣ್ಣ, ಶೇಖ್ ಅಹ್ಮದ್ ಮುದ್ದೆ, ಭೀಮರಾವ್ ದಳಪತಿ, ರಾಜರೆಡ್ಡಿ ನಾಗೂರ, ನರಸಪ್ಪ ಜಾನಕೆ, ಸಂಜುಕುಮಾರ್ ಕೋಳಿ, ಸಂಜುಕುಮಾರ್ ಕೋಟಾರೆ, ಪ್ರೇಮ, ವಿಠ್ಠಲರಾವ್ ಪಾಟೀಲ್, ಸಿದ್ದಣ್ಣ ಭಂಗೂರ್, ಗೋಪಾಲರೆಡ್ಡಿ, ಮಲ್ಲಿಕಾರ್ಜುನ ಮೂಲಗೆ, ಚಂದ್ರಶೇಖರ ಪಾಟೀಲ್, ರಾಜಕುಮಾರ್ ಪಾಟೀಲ್, ಬಾಬುರಾವ್ ಬಿಟ್ಟೆ, ಸಲೀಂ, ಮಚೀಂದ್ರ, ಭೀಮರಾವ್, ಪ್ರಶಾಂತ್, ಶಿವು ಬುಧೇರ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 