ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ
MLA Dr. Shailendra Beldale launches various development works
ಬೀದರ್ 25 : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊಕ್ರಾಣಾ (ಕೆ) ಹಾಗೂ ಹೊಕ್ರಾಣಾ (ಬಿ) ಗ್ರಾಮಗಳ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ವಿವಿಧ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ರಾಜಗೀರಾ ಗ್ರಾಮದಿಂದ ಹೊಕ್ರಾಣಾ (ಕೆ) ಹಾಗೂ ಹೊಕ್ರಾಣಾ (ಬಿ) ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 10 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಈ ರಸ್ತೆ ನಿರ್ಮಾಣದಿಂದ ಎರಡು ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಈ ರಸ್ತೆ ಪೂರ್ಣಗೊಂಡಿರುವುದರಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಅನುಕೂಲ ಪಡೆಯುತ್ತಿದ್ದಾರೆ.ಇದೀಗ ಹೊಕ್ರಾಣಾ (ಕೆ) ಗ್ರಾಮದಲ್ಲಿ ?35 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ಬಸವೇಶ್ವರ ದೇವಸ್ಥಾನಕ್ಕೆ ?5 ಲಕ್ಷ ವೆಚ್ಚದ ಭವನ ನಿರ್ಮಾಣ ಕಾಮಗಾರಿ ಹಾಗೂ ಹೊಕ್ರಾಣಾ (ಬಿ) ಗ್ರಾಮದ ಭೀಮಾಶಂಕರ ದೇವಸ್ಥಾನದ ಬಳಿ ?5 ಲಕ್ಷ ವೆಚ್ಚದ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 