ರಾಮಗಿರಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ ಚಂದ್ರು ಲಮಾಣಿ
MLA Dr Chandru Lamani performed the Bhoomi Puja for the construction of CC road in Ramagiri village.
ಲಕ್ಷ್ಮೇಶ್ವರ" 03 : ತಾಲೂಕಿನ ರಾಮಗಿರಿ ಗ್ರಾಮದಲ್ಲಿಲೋಕೋಪಯೋಗಿ ಇಲಾಖೆಯ ಗದಗ ಉಪ ವಿಭಾಗ ಶಿರಹಟ್ಟಿ ಇಲಾಖೆಯ ಯೋಜನೆ ಅಡಿಯಲ್ಲಿ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು ಈ ಸಮಯದಲ್ಲಿ ಗ್ರಾಮದಲ್ಲಿರುವ ಹಲವಾರು ಸಮಸ್ಯೆಗಳನ್ನು ಗ್ರಾಮಸ್ಥರು ಶಾಸಕರ ಮುಂದೆ ತಿಳಿಸಿದರು ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದ ಶಾಸಕ ಡಾ ಚಂದ್ರು ಲಮಾಣಿ ಅವರು ಸಂಬಂಧಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಪ್ರತಿದಿನ ಕುಡಿಯುವ ನೀರು ಬಿಡುವ ವ್ಯವಸ್ಥೆ ಮಾಡಬೇಕು.
ಚಂಡಿಗಳನ್ನು ಸ್ವಚ್ಛಗೊಳಿಸಲು ಮುಂದಾಗಬೇಕು ಗ್ರಾಮಸ್ಥರೊಂದಿಗೆ ಸಹಕರಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು ಹಾಗೂ ಗ್ರಾಮಸ್ಥರೊಂದಿಗೆ ಶಾಸಕರು ಕೆಲ ಚರಂಡಿಗಳು ಸ್ವಚ್ಛತೆ ಕಾಣದೆ ಇರುವುದನ್ನು ವೀಕ್ಷಿಸಿ ಸ್ವಚ್ಛತೆ ಮಾಡಲು ತಿಳಿಸಿದರು ಈ ಸಮಯದಲ್ಲಿ ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿ ಮೃತ್ಯುಂಜಯ ಗುಡ್ಡದನವೇರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನುಜಾ ಬೆನಕಟ್ಟಿ ಗ್ರಾಮಸ್ಥರಾದ ಸಿದ್ದಪ್ಪ ಕಾಳಿ ಸೋಮಣ್ಣ ಬೇವಿನಮರದ ಬಸಪ್ಪ ಶಿಗಣ್ಣವರ ರಾಜು ಬೆಟಿಗೇರಿ ಪ್ರದೀಪ ಪಾಟೀಲ ಬೀರ್ಪ ಕೆರೂರು ಗಂಗಾಧರ ಮೆಣಸಿನಕಾಯಿ ಭೀಮಣ್ಣ ಯಂಗಾಡಿ ಶಿವಾನಂದ ಕಡೆಮನಿ, ಕೊಡೆಪ್ಪ ಬೆಟಿಗೇರಿ ಶ್ರೀನಾಥ್ ಗೋಡಿ ಸೇರಿದಂತೆ ಅನೇಕ ಗ್ರಾಮದ ಮುಖಂಡರು ಇದ್ದರು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 