ಚಿಕ್ಕೋಡಿ 23: ಚಿಕ್ಕೋಡಿ-ಸದಲಗಾ ಕ್ಷೇತ್ರದ ಚಿಕ್ಕಲವಾಳ-ರಾಂಪೂರ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.
ರವಿವಾರ ತಾಲೂಕಿನ ಚಿಕ್ಕಲವಾಲ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಮುಖಂಡರು ಮತ್ತು ಹಿರಿಯರಾದ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಕ್ಷೇತ್ರದ ಸರ್ವಾಂಗೀನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಚಿಕ್ಕಲವಾಳ ಮತ್ತು ರಾಂಪೂರ ಮಾರ್ಗವಾಗಿ ಎನ್‌ಎಂ ರಸ್ತೆಯವರೆಗೆ ಡಾಂಬರಿಕರಣ ಮಾಡಬೇಕೆಂದು ಕಾರ್ಯಕರ್ತರ ಬೇಡಿಕೆ ಅನುಗುಣವಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬರುವ ಎರಡು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಚಿಕ್ಕಲವಾಳ ಮತ್ತು ರಾಂಪೂರ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.