ಕಂಪ್ಲಿ ಉತ್ಸವ ಹಿನ್ನಲೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕ ಗಣೇಶ
MLA Ganesh holds meeting with taluk level officials ahead of Kampli festival
ಕಂಪ್ಲಿ 06: ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಕಂಪ್ಲಿ ಉತ್ಸವದ ಹಿನ್ನಲೆ ಶಾಸಕ ಜೆ.ಎನ್.ಗಣೇಶ ಶುಕ್ರವಾರ ಸಭೆ ನಡೆಸಲಾಯಿತು. ಇಲ್ಲಿನ ಸಭೆಯಲ್ಲಿ ಉತ್ಸವದ ಪೂರ್ವಸಿದ್ಧತೆ, ಕಂಪ್ಲಿ-ಕೋಟೆಯಿಂದ ಅದ್ಧೂರಿ ಮೆರವಣಿಗೆ, ವಿದ್ಯುತ್ ದೀಪಾಲಂಕಾರ, ಅಲಂಕೃತ ಎತ್ತಿನ ಬಂಡಿ, ಹೀಗೆ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಕಂಪ್ಲಿ ಉತ್ಸವದ ಯಶಸ್ವಿಗೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಪ್ರತಿಯೊಂದು ಹಂತದಲ್ಲಿ ಅಧಿಕಾರಿಗಳು ಸಾಥ್ ನೀಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ. ನಿಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಹಿಸಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 