ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಗಣೇಶ
MLA Ganesh lays foundation stone for road development work
ಕಂಪ್ಲಿ 01: ಕಂಪ್ಲಿ ನಗರ ಸಂಪರ್ಕಿಸುವ ನಾಲ್ಕು ದಿಕ್ಕಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ಕಂಪ್ಲಿ-ಕೋಟೆಯ ತುಂಗಭದ್ರ ನದಿ ಸೇತುವೆ ಬಳಿಯಲ್ಲಿ 2024-25ನೇ ಸಾಲಿನ ಸಿಎಂ ವಿಶೇಷ ಅನುದಾನದ ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಕಂಪ್ಲಿ-ಕೋಟೆಯಿಂದ ಹೊಸ ಬಸ್ ನಿಲ್ದಾಣದವರೆಗಿನ ರಸ್ತೆ ಅಭಿವೃದ್ಧಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮೊರಾರ್ಜಿ ದೇಸಾಯಿ, ಜಿಟಿಟಿಸಿ ಶಾಲೆ ಹಾಗೂ ಹಳೆ ಬಸ್ ನಿಲ್ದಾಣದ ನೀರಾವರಿ ಇಲಾಖೆಯ ಕಾಂಪೌಂಡ್ ಗೋಡೆ ತೆರವುಗೊಳಿಸಿ, ಹೃದಯ ಭಾಗವಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ.
ಬಹುದಿನದ ಕನಸಾಗಿರುವ ಕಂಪ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೋಳಿಯವರು ಭೇಟಿ ನೀಡಿ ಪರೀಶೀಲಿಸಿದ್ದಾರೆ. ಇತ್ತೀಚೆಗೆ ನಡೆದ ಅಧಿವೇಶನದ ಸಂದರ್ಭದಲ್ಲಿ ಮಾನ್ಯ ಸಚಿವರನ್ನು ಭೇಟಿ ಮಾಡಿ, ಹೊಸ ಸೇತುವೆ ಬಗ್ಗೆ ಚರ್ಚಿಸಿದ್ದು, ನಬಾರ್ಡ್ ಮತ್ತು ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಕಂಪ್ಲಿ ಹೊಸ ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ. ಶಿಕ್ಷಣ, ರಸ್ತೆ ಸೇರಿದಂತೆ ಪ್ರತಿಯೊಂದು ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಸುಮಾರು 6.70 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ವಾಲ್ಮೀಕಿ ವೃತ್ತದಿಂದ ಸಕ್ಕರೆ ಕಾರ್ಖಾನೆಯ ಸ್ವಾಗತ ಕಮಾನುವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಭೂಮಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸದಸ್ಯರಾದ ಕೆ.ಎಸ್.ಚಾಂದ್ ಬಾಷಾ, ಸಿ.ಆರ್.ಹನುಮಂತ, ಲೊಡ್ಡು ಹೊನ್ನೂರವಲಿ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕಂಪ್ಲಿ ಕೇತ್ರ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಯಾಜ್ ಅಹಮ್ಮದ್, ಮುಖಂಡರಾದ ಚನ್ನಯ್ಯಸ್ವಾಮಿ, ಡಿ.ಮೌನೇಶ, ಎ.ಸಿ.ದಾನಪ್ಪ, ಎಂ.ಸುಧೀರ್, ಕೆ.ಮನೋಹರ, ಯಾಲ್ಪಿ ಅಬ್ದುಲ್ ಮುನಾಫ್, ವಿ.ಸತ್ಯಪ್ಪ, ಆಟೋ ರಾಘು, ಕಂಬರ್ ರಮೇಶ, ಡೆಕೊರೇಷನ್ ನಾಗರಾಜ, ಕೆ.ಹೊನ್ನೂರ್ಪ, ಡಿಸ್ ಪ್ರಸಾದ್, ವಿರುಪಾಕ್ಷಿ, ಪರಶುರಾಮ, ಖಾಜಾ, ಶಶಿಕುಮಾರ ಸೇರಿದಂತೆ ಅನೇಕರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 