ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಶಾಸಕ ಹೆಚ್‌.ಆರ್‌.ಗವಿಯಪ್ಪ

ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಶಾಸಕ ಹೆಚ್‌.ಆರ್‌.ಗವಿಯಪ್ಪ  MLA H.R. Gaviappa inaugurates World Senior Citizens Day celebrations, inspiring the youth with the l

ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆವಿಶ್ವ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ಶಾಸಕ ಹೆಚ್‌.ಆರ್‌.ಗವಿಯಪ್ಪ  

ವಿಜಯನಗರ (ಹೊಸಪೇಟೆ) 09: ಹಿರಿಯರ ಜೀವನ ಶೈಲಿ, ಶಿಸ್ತುಬದ್ಧ ನಡವಳಿಕೆ, ಅಹಾರ ಪದ್ದತಿ, ಆರೋಗ್ಯ ಕಾಳಜಿ, ಕಾಯಕ ನಿಷ್ಠೆ, ವೃತ್ತಿ ಧರ್ಮ ಪಾಲನೆ ಸೇರಿದಂತೆ ಅವರ ಜೀವನಾನುಭವಗಳು ಯುವಜನತೆಯಲ್ಲಿ ಪ್ರೇರಣೆ ಮೂಡಿಸಲಿವೆ ಎಂದು ಶಾಸಕ ಹೆಚ್‌.ಆರ್‌.ಗವಿಯಪ್ಪ ಹೇಳಿದರು.  

ನಗರದ ಶ್ರೀಸಾಯಿಲೀಲಾ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ ಏರಿ​‍್ಡಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು, ಪ್ರತಿಯೊಬ್ಬರು ನಿಮ್ಮ ಕುಟುಂಬದ ಹಿರಿಯರನ್ನು ಗೌರವಿಸಬೇಕು. ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಬೇಕು. ಹಿರಿಯರ ಜೀವನದಲ್ಲಿ ನಡೆದ ಅನೇಕ ಘಟನೆಗಳು ನಿಮ್ಮ ಮುಂದಿನ ಭವಿಷ್ಯಕ್ಕೆ ಸ್ಪೂರ್ತಿದಾಯಕವಾಗಿರಲಿವೆ. ಈಗಾಗಲೇ ಹೊಸಪೇಟೆ ನಗರದ ಅಭಿವೃದ್ಧಿಗೆ ಪ್ರತಿ ವಾರ್ಡಿನಲ್ಲಿ ಸಿಸಿ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ನೀಡಲು ಸುಮಾರು 70ಕೋಟಿ ರೂಗಳ ಅನುದಾನಕ್ಕೆ ಕ್ರೀಯಾಯೋಜನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಅನುದಾನ ಬಿಡುಗಡೆಯಾಗಲಿದೆ. ನಗರದ ಸೌಂದರ್ಯಕರಣಕ್ಕೆ ಗುಣಮಟ್ಟದ ಕಾಮಗಾರಿ ಕಾರ್ಯ ಅಗತ್ಯವಿದೆ. ಕಾಮಗಾರಿಗಳ ಗುಣಮಟ್ಟವನ್ನು ಪರೀಶೀಲಿಸಲು ಸ್ಥಳೀಯ ಹಿರಿಯ ನಾಗರಿಕರ ಸಲಹೆ ಸಹಕಾರ ಅತ್ಯಗತ್ಯವಿದೆ. ಹೊಸಪೇಟೆ ನಗರದಲ್ಲಿರುವ ಹಿರಿಯ ನಾಗರಿಕರು ನಗರದ ಅಭಿವೃದ್ಧಿ ವಿಚಾರಕ್ಕೆ ತಾವುಗಳು ಮುಕ್ತವಾಗಿ ಸಲಹೆಗಳನ್ನು ನೀಡಬಹುದು ಎಂದರು.   

ಜಿಲ್ಲಾಧಿಕಾರಿ ಕವಿತಾ.ಎಸ್‌.ಮನ್ನಿಕೇರಿ ಮಾತನಾಡಿ, ಹಿರಿಯ ನಾಗರಿಕರಿಗಾಗಿ ವಿಶೇಷ ಕಾಯ್ದೆಗಳಿವೆ. ಅವುಗಳ ಪ್ರಕಾರ ಹಿರಿಯ ನಾಗರಿಕರ ಆಸ್ತಿಯನ್ನು ಮಕ್ಕಳಿಗೆ ವರ್ಗಾವಣೆ ಮಾಡಲು ಒತ್ತಾಯ ಮಾಡುವುದು. ಮನೆಯಲ್ಲಿ ಅನಗತ್ಯ ಸಮಸ್ಯೆ ಸೃಷ್ಟಿಸಿ ಕಿರುಕುಳಗಳನ್ನು ನೀಡುವುದು. ವೃದ್ಧಾಶ್ರಮಕ್ಕೆ ತೆರಳುವಂತೆ ಒತ್ತಾಯಿಸಿದಲ್ಲಿ ಸ್ಥಳೀಯ ಸಹಾಯಕ ಆಯುಕ್ತರಿಗೆ ದೂರು ದಾಖಲಿಸಬಹುದಾಗಿದೆ. ಹಿರಿಯ ನಾಗರಿಕರನ್ನು ಸಮಾಜ ಮತ್ತು ಕುಟುಂಬದವರು ಗೌರವಿಸಬೇಕು. ಸಧೃಡ ಸಮಾಜ ನಿರ್ಮಾಣಕ್ಕೆ ಹಿರಿಯ ನಾಗರಿಕರ ಪಾತ್ರ ಮುಖ್ಯವಾಗಿದೆ. ಹಿರಿಯ ನಾಗರಿಕರಿಗಾಗಿ ಸರ್ಕಾರಗಳು ನೀಡುವ ಹಲವು ಸೌಲಭ್ಯಗಳನ್ನು ಮತ್ತು ಯೋಜನೆಗಳನ್ನು ಸದ್ಭಳಕೆಗೆ ಮುಂದಾಗಬೇಕು. ಹಿರಿಯನಾಗರಿಕರ ಸಂಕಷ್ಟಗಳು ಮತ್ತು ಸಮಸ್ಯೆಗಳಿಗೆ ಜಿಲ್ಲಾಡಳಿತ ಸದಾ ಸ್ಪಂದಿಸುವ ಕಾರ್ಯ ಮಾಡಲಿದೆ ಎಂದು ಆತ್ಮಸ್ಥೈರ್ಯದ ಭರವಸೆ ನೀಡಿದರು.  

ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ಈಶ್ವರಿ ಮಹಾವಿದ್ಯಾಲಯದ ಸಂಚಾಲಕರಾದ ಮಾನಸ ಹಿರಿಯ ನಾಗರಿಕರನ್ನು ಉದ್ದೇಶಿಸಿ ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಈಚೇಗೆ ನಡೆದ ವಿಶ್ವ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ, ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರಿಗೆ ಗೌರವಿಸಿ ಸನ್ಮಾನಿಸಲಾಯಿತು.  

ಈ ವೇಳೆ ಹೂವಿನಹಡಗಲಿ ಮಾಜಿಶಾಸಕ ನಂದಿಹಳ್ಳಿ ಹಾಲಪ್ಪ, ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಜಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್‌.ಶ್ವೇತಾ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಮೌನೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಲಂಪಾಷ್, ತಾಲೂಕು ಕಾನೂನು ಸೇವಾ ಸಮಿತಿ ವಕೀಲರಾದ ಶ್ವೇತಾಂಬರಿ ಮತ್ತು ಸುಮಂಗಳಮ್ಮ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿಂಧು ಅಂಗಡಿ, ಹಿರಿಯ ನಾಗರಿಕರ ಜಿಲ್ಲಾ ಕಲ್ಯಾಣಾಧಿಕಾರಿ ರಾಮಾಂಜನೇಯ ಸೇರಿದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಶಿಕ್ಷಕಿಯರು, ಹಿರಿಯ ನಾಗರಿಕರು ಮತ್ತು ವಿಕಲಚೇತನರು ಭಾಗವಹಿಸಿದ್ದರು.