ಅರ್ಹರಿಗೆ ಪಡಿತರ ಚೀಟಿ ವಿತರಿಸಲು ಶಾಸಕ ಹಲಗೇಕರ ಸೂಚನೆ
MLA Halagekar instructs to distribute ration cards to eligible people
ಲೋಕದರ್ಶನ ವರದಿ
ಖಾನಾಪುರ 14: ತಾಲೂಕಿನಲ್ಲಿ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ಸಿಗುವಂತೆ ಗಮನಹರಿಸಬೇಕು. ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು. ತಹಶೀಲ್ದಾರ್ ಕಚೇರಿಯನ್ನು ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಗೃಹದಲ್ಲಿ ಏರಿ್ಡಸಿದ್ದ ತಾಲೂಕು ಮಟ್ಟದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ’ತಾಲೂಕಿನಲ್ಲಿ ಇಲ್ಲಿಯವರೆಗೆ ನಡೆಯುತ್ತಿದ್ದ ಮರಳು ಸರಬರಾಜು ಈಗ ದಿಢೀರ್ ನಿಂತಿದೆ. ಇದರ ಪರಿಣಾಮ ಕಟ್ಟಡ ನಿರ್ಮಾಣ ಮಾಡುವವರ, ಕೂಲಿ ಕಾರ್ಮಿಕರ ಮತ್ತು ಇಟ್ಟಿಗೆ ಭಟ್ಟಿಯವರು ತೊಂದರೆ ಅನುಭವಿಸುವಂತಾಗಿದೆ. ಈ ಕೂಡಲೇ ತಾಲೂಕಿನ ಜನತೆಗೆ ಸುಲಭವಾಗಿ ಮರಳು ಸರಬರಾಜು ಆಗುವಂತೆ ಕ್ರಮ ಜರುಗಿಸಬೇಕು. ಏಪ್ರಿಲ್ ತಿಂಗಳಲ್ಲಿ ಹಲಸಿ, ಬೈಲೂರು ಸೇರಿದಂತೆ ತಾಲೂಕಿನ ಹಲವು ಕಡೆಗಳಲ್ಲಿ ಗ್ರಾಮದೇವಿಯರ ಜಾತ್ರಾ ಮಹೋತ್ಸವ ನಿಗದಿಯಾಗಿದೆ. ಜಾತ್ರೆಗಳು ಸಾಂಗವಾಗಿ ನೆರವೇರುವ ನಿಟ್ಟಿನಲ್ಲಿ ತಾಲೂಕು ಆಡಳಿತ ಈಗಿನಿಂದಲೇ ಪೂರ್ವ ಸಿದ್ಧತೆಗಳನ್ನು ಆರಂಭಿಸಬೇಕು ಎಂದು ಸೂಚಿಸಿದರು.
ಖಾನಾಪುರ ತಾಲೂಕಿನಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಮರಳಿ ಅರಣ್ಯದತ್ತ ಓಡಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಸಭೆಯಲ್ಲಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಸೂರ್ಯಕಾಂತ ಕುಲಕರ್ಣಿ, ಇಒ ರಮೇಶ ಮೇತ್ರಿ, ಬಿಇಒ ರಾಮಪ್ಪ, ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ ಕಿವಡಸಣ್ಣವರ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಮನೋಹರ ದಾದ್ರಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 