ಸುಮಾರು 10.11 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಶಂಕುಸ್ಥಾಪನೆ
MLA J.N. Ganesh lays foundation stone for various development works costing around Rs. 10.11 crores
ಕಂಪ್ಲಿ 23 ಸುಮಾರು 10.11 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು, ಶಾಲಾ ಕೊಠಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಸೋಮವಾರ ಅಡಿಗಲ್ಲು ಭೂಮಿ ಸಲ್ಲಿಸಿದರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾಪಂಯ ಜವುಕು ಗ್ರಾಮದಲ್ಲಿ 2024-25ನೇ ಸಾಲಿನ ಜೆಜೆಎಂ ಯೋಜನೆಯಡಿ ಸುಮಾರು 994 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಜವುಕು ಸೇರಿದಂತೆ ಇತರೆ ಗ್ರಾಮಗಳಿಗೆ ಕುಡಿಯುವ ನೀರಿನ ಕೆರೆ ಹಾಗೂ ಪೈಪ್‌ಲೈನ್‌ದೊಂದಿಗೆ ನಳ ಅಳವಡಿಕೆ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಗಣೇಶ ಅವರು, ಇಲ್ಲಿನ ಜವುಕು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಗೆ ಕುಡಿಯುವ ನೀರಿನ ಅವಶ್ಯಕತೆ ಇದೆ. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದು, ಇಲ್ಲಿನ ಕುಡಿಯುವ ನೀರಿನ ಕೆರೆ ಅಭಿವೃದ್ಧಿಪಡಿಸಲಾಗುತ್ತದೆ. ಕೆರೆಯಲ್ಲಿ ಸಮತಟ್ಟು, ಸೀಟ್ ನಿರ್ಮಾಣದೊಂದಿಗೆ ನೀರು ನಿಲ್ಲುವಂತೆ ಮಾಡಿ, ಕೆರೆಯಲ್ಲಿ ಕಾಲುವೆ ಮೂಲಕ ಪೈಪ್‌ಲೈನ್ ಅಳವಡಿಸಿ, ನೀರು ತುಂಬಿಸಿ, ಜನತೆಗೆ ಕಲ್ಪಿಸಲಾಗುವುದು. ಈಗಾಗಲೇ ಉಪ್ಪಾರಹಳ್ಳಿ, ದೇವಲಾಪುರ ಕೆರೆ ಅಭಿವೃದ್ಧಿಪಡಿಸಿದಂತೆ ಈಗ ಜವುಕು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಈ ಭಾಗದಲ್ಲಿ ಸಾಕಷ್ಟು ಕಡು ಬಡವರಿದ್ದು, ಮುಂದಿನ ದಿನದಲ್ಲಿ ಎಸ್ಸಿ, ಎಸ್ಟಿ ಬಸವ ಯೋಜನೆಯಡಿ ಹಾಗೂ ವಿವಿಧ ಯೋಜನೆಗಳ ಪ್ರತಿ ಗ್ರಾಪಂ ಮಟ್ಟದಲ್ಲಿ 220 ಮನೆ ನೀಡುವ ಗುರಿ ಹೊಂದಲಾಗಿದೆ. ಬಡ ಜನತೆಗೆ ನಿವೇಶನ ಜತೆಗೆ ಸೂರು ಒದಗಿಸಿಕೊಡುವ ಭರವಸೆ ನೀಡಿದರು.
ನಂತರ ಮೆಟ್ರಿ ಗ್ರಾಪಂಯ ಉಪ್ಪಾರಹಳ್ಳಿ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ(ಮೈಕ್ರೋ ಪ್ರಾಜೆಕ್ಟ್) ಯೋಜನೆಯಡಿ ಸುಮಾರು 17 ಲಕ್ಷ ವೆಚ್ಚದಲ್ಲಿ ಸ.ಹಿ.ಪ್ರಾ ಶಾಲೆಯ 1 ಶಾಲಾ ಕೊಠಡಿಗೆ ಅಡಿಗಲ್ಲು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರಾವ್, ಮೆಟ್ರಿ ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸದಸ್ಯ ಮೆಟ್ರಿ ಗೀರೀಶ, ಮುಖ್ಯಗುರು ಮಲ್ಲಿಕಾರ್ಜುನ, ಇಸಿಒ ರೇವಣ್ಣ, ಎಸ್ಟಿಎಂಸಿ ಅಧ್ಯಕ್ಷೆ ಲಕ್ಷ್ಮೀ, ಜವುಕು ಗ್ರಾಮದ ಮುಖಂಡ ಮಲ್ಲಿಕಾರ್ಜುನ, ಪಿಡಿಒ ಭೀರಲಿಂಗ, ಶಿವನಗೌಡ, ಜನಪ್ರತಿನಿಧಿಗಳು, ಮುಖಂಡರು, ಸಹ ಶಿಕ್ಷಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 