ಶಾಲಾ ಕೊಠಡಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಎನ್ ಗಣೇಶ ಭೂಮಿ ಪೂಜೆ
MLA J.N. Ganesh performs Bhoomi Puja for school room and toilet construction work
ಕಂಪ್ಲಿ. 26: ತಾಲೂಕಿನ ಮೇಟ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಚಿನ್ನಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಕೆಕೆಆರ್‌ಡಿಬಿ ಯೋಜನೆಡಿಯಲ್ಲಿ ಸುಮಾರು 23.90 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣ ಮತ್ತು ಹಂಪದೇವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗೋನಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನಲ್ಲಿ ಕೆ ಕೆಆರ್‌ಡಿಬಿ ಯೋಜನೆಯಡಿ ಸುಮಾರು 20.70.ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಜೆ.ಎನ್ ಗಣೇಶ ಭೂಮಿ ಪೂಜೆ ನೇರವೇರಿಸಿದರು.
ನಂತರ ಶಾಸಕ ಗಣೇಶ ಮಾತನಾಡಿ, ಶಾಲೆಯ ಮಕ್ಕಳ ಶೈಕ್ಷಣಿಕ ಮಟ್ಟದ ಅಭಿವೃದ್ಧಿಗೆ ಪ್ರತಿಯೊಂದು ಹಂತದಲ್ಲಿ ಅನುದಾನ ತಂದು, ಅಭಿವೃದ್ಧಿಪಡಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಮೊದಲ ಅಧ್ಯತೆ ನೀಡಲಾಗುತ್ತಿದೆ. ಜೊತೆಗೆ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಎಂದರು.
ಗೋನಾಳ ಗ್ರಾಮದ ಶಾಲೆಯ ಎಸ್ ಡಿ.ಎಂ.ಸಿ ಅಧ್ಯಕ್ಷ ಸರದಾರ ಎಚ್.ಎಂ ರವಿಕುಮಾರ ಸಹ ಶಿಕ್ಷಕ ರಮೇಶ ಅಂಜಿನಿ ಅಂಜಿನೇಯ ಬಳ್ಳಾರಿ ಜಿಲ್ಲಾ ಕಾಂಗ್ರೇಸ್ ಎಸ್.ಸಿ.ಮೋರ್ಚ.ಉಪಾಧ್ಯಕ್ಷ ದೇವಣ್ಣ ಬನ್ನಪ್ಪ ಚಿನ್ನಾಪುರ ಶಾಲೆಯ ಎಸ್ ಡಿ.ಎಂ.ಸಿ ಅಧ್ಯಕ್ಷ ರಮೇಶ ಎಚ್ ಎಂ ಉಷಾರಾಣಿ ಮೆಟ್ರೀ ಗ್ರಾಮ ಪಂಚಾಯಿತಿ ಸದಸ್ಯರಾದ ಕುಶಾಲಪ್ಪ .ಕುಮಾರ .ಗೀರೀಶ ಮುಖಂಡರಾದ ಮಲ್ಲಿಕಾರ್ಜುನ ಜಿ ರಾಮುಲು ಅಂಜಿ ಸ್ವಾಮಿ ಮಹೇಶ ದೂದಬಾಷ ಮಕ್ಕಳು ಸೇರಿ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 