ಸರ್ಕಾರದಿಂದ 25 ಕೋಟಿ ಅನುದಾನ ತಂದು ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸುವ ಭರವಸೆ ಶಾಸಕ ಜೆ.ಎನ್.ಗಣೇಶ
MLA J.N. Ganesh promises to construct a new court building with a grant of Rs. 25 crore from the gov
ಲೋಕದರ್ಶನ ವರದಿ
ಕಂಪ್ಲಿ 26: ಈಗಾಗಲೇ ಸುಸಜ್ಜಿತ ನ್ಯಾಯಾಲಯ ನಿರ್ಮಾಣಕ್ಕಾಗಿ 3.13 ಎಕರೆ ಜಾಗ ಮೀಸಲಿಟ್ಟಿದ್ದು, ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಿ, ಸುಮಾರು 25 ಕೋಟಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈಗ ಆರಂಭಗೊಂಡಿರುವ ನ್ಯಾಯಾಲಯದಲ್ಲಿ ಒಂದೊಂದಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ಪಟ್ಟಣದ 20ನೇ ವಾರ್ಡಿನ ಶಿಬಿರದಿನ್ನಿ (ಮಾರುತಿನಗರ) ಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಸಿವಿಎಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನಾ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಕಂಪ್ಲಿಯಲ್ಲಿ ನ್ಯಾಯಾಲಯ ಸ್ಥಾಪಿಸುವ ಕನಸಾಗಿತ್ತು. ಆದರೆ, ಈಗ ಆ ಕನಸು ನನಸಾಗಿದೆ. ಇಲ್ಲಿನ ನ್ಯಾಯಾಲಯದಿಂದ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.ಈ ಸಂದರ್ಭದಲ್ಲಿ ವಕೀಲರಾದ ಪ್ರಭಾಕರ, ಹರೀಶ್, ರುದ್ರ್ಪ, ಶಿವಪ್ಪ, ಯಂಕಪ್ಪ, ನಟರಾಜ, ಹುಲುಗಪ್ಪ, ವೀರಣ್ಣ, ಮಾರುತಿಸಿಂಗ್, ಮೋಹನ್ ಕುಮಾರ್ ದಾನಪ್ಪ, ಮುಂಖಡರಾದ ಕೆ.ಎಂ.ಹೇಮಯ್ಯಸ್ವಾಮಿ, ಹೊಸಕೋಟೆ ಜಗದೀಶ, ಜಿ.ರಾಮಣ್ಣ, ಬಿ.ಸಿದ್ದಪ್ಪ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 